< מִשְׁלֵי 17 >
טוב פת חרבה ושלוה-בה-- מבית מלא זבחי-ריב | 1 |
೧ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, ಸಮಾಧಾನದ ಒಣತುತ್ತೇ ಮೇಲು.
עבד-משכיל--ימשל בבן מביש ובתוך אחים יחלק נחלה | 2 |
೨ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು, ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.
מצרף לכסף וכור לזהב ובחן לבות יהוה | 3 |
೩ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.
מרע מקשיב על-שפת-און שקר מזין על-לשון הות | 4 |
೪ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು, ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು.
לעג לרש חרף עשהו שמח לאיד לא ינקה | 5 |
೫ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.
עטרת זקנים בני בנים ותפארת בנים אבותם | 6 |
೬ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ.
לא-נאוה לנבל שפת-יתר אף כי-לנדיב שפת-שקר | 7 |
೭ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ.
אבן-חן השחד בעיני בעליו אל-כל-אשר יפנה ישכיל | 8 |
೮ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.
מכסה-פשע מבקש אהבה ושנה בדבר מפריד אלוף | 9 |
೯ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
תחת גערה במבין-- מהכות כסיל מאה | 10 |
೧೦ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.
אך-מרי יבקש-רע ומלאך אכזרי ישלח-בו | 11 |
೧೧ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.
פגוש דב שכול באיש ואל-כסיל באולתו | 12 |
೧೨ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.
משיב רעה תחת טובה-- לא-תמיש (תמוש) רעה מביתו | 13 |
೧೩ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.
פוטר מים ראשית מדון ולפני התגלע הריב נטוש | 14 |
೧೪ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
מצדיק רשע ומרשיע צדיק-- תועבת יהוה גם-שניהם | 15 |
೧೫ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.
למה-זה מחיר ביד-כסיל-- לקנות חכמה ולב-אין | 16 |
೧೬ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.
בכל-עת אהב הרע ואח לצרה יולד | 17 |
೧೭ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.
אדם חסר-לב תוקע כף ערב ערבה לפני רעהו | 18 |
೧೮ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ.
אהב פשע אהב מצה מגביה פתחו מבקש-שבר | 19 |
೧೯ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು.
עקש-לב לא ימצא-טוב ונהפך בלשונו יפול ברעה | 20 |
೨೦ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.
ילד כסיל לתוגה לו ולא-ישמח אבי נבל | 21 |
೨೧ಮೂರ್ಖನನ್ನು ಹೆತ್ತವರಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ.
לב שמח ייטיב גהה ורוח נכאה תיבש-גרם | 22 |
೨೨ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.
שחד מחק רשע יקח-- להטות ארחות משפט | 23 |
೨೩ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು.
את-פני מבין חכמה ועיני כסיל בקצה-ארץ | 24 |
೨೪ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು.
כעס לאביו בן כסיל וממר ליולדתו | 25 |
೨೫ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ.
גם ענוש לצדיק לא-טוב-- להכות נדיבים על-ישר | 26 |
೨೬ಶಿಷ್ಟನಿಗೆ ದಂಡನೆ ಯುಕ್ತವಲ್ಲ, ಧರ್ಮಿಷ್ಠನಿಗೆ ಪೆಟ್ಟು ಅಧರ್ಮ.
חושך אמריו יודע דעת וקר- (יקר-) רוח איש תבונה | 27 |
೨೭ಮಿತವಾಗಿ ಮಾತನಾಡುವವನು ಜ್ಞಾನಿ, ಶಾಂತಾತ್ಮನು ವಿವೇಕಿ.
גם אויל מחריש חכם יחשב אטם שפתיו נבון | 28 |
೨೮ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.