< מִשְׁלֵי 19 >
טוב-רש הולך בתמו-- מעקש שפתיו והוא כסיל | 1 |
೧ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.
גם בלא-דעת נפש לא-טוב ואץ ברגלים חוטא | 2 |
೨ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.
אולת אדם תסלף דרכו ועל-יהוה יזעף לבו | 3 |
೩ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.
הון--יסיף רעים רבים ודל מרעהו יפרד | 4 |
೪ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.
עד שקרים לא ינקה ויפיח כזבים לא ימלט | 5 |
೫ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.
רבים יחלו פני-נדיב וכל-הרע לאיש מתן | 6 |
೬ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.
כל אחי-רש שנאהו-- אף כי מרעהו רחקו ממנו מרדף אמרים לא- (לו-) המה | 7 |
೭ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.
קנה-לב אהב נפשו שמר תבונה למצא-טוב | 8 |
೮ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
עד שקרים לא ינקה ויפיח כזבים יאבד | 9 |
೯ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.
לא-נאוה לכסיל תענוג אף כי-לעבד משל בשרים | 10 |
೧೦ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.
שכל אדם האריך אפו ותפארתו עבר על-פשע | 11 |
೧೧ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
נהם ככפיר זעף מלך וכטל על-עשב רצונו | 12 |
೧೨ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
הות לאביו בן כסיל ודלף טרד מדיני אשה | 13 |
೧೩ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
בית והון נחלת אבות ומיהוה אשה משכלת | 14 |
೧೪ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
עצלה תפיל תרדמה ונפש רמיה תרעב | 15 |
೧೫ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
שמר מצוה שמר נפשו בוזה דרכיו יומת (ימות) | 16 |
೧೬ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.
מלוה יהוה חונן דל וגמלו ישלם-לו | 17 |
೧೭ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
יסר בנך כי-יש תקוה ואל-המיתו אל-תשא נפשך | 18 |
೧೮ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,
גרל- (גדל-) חמה נשא ענש כי אם-תציל ועוד תוסף | 19 |
೧೯ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.
שמע עצה וקבל מוסר-- למען תחכם באחריתך | 20 |
೨೦ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.
רבות מחשבות בלב-איש ועצת יהוה היא תקום | 21 |
೨೧ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
תאות אדם חסדו וטוב-רש מאיש כזב | 22 |
೨೨ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.
יראת יהוה לחיים ושבע ילין בל-יפקד רע | 23 |
೨೩ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.
טמן עצל ידו בצלחת גם-אל-פיהו לא ישיבנה | 24 |
೨೪ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.
לץ תכה ופתי יערם והוכיח לנבון יבין דעת | 25 |
೨೫ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.
משדד-אב יבריח אם-- בן מביש ומחפיר | 26 |
೨೬ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.
חדל-בני לשמע מוסר לשגות מאמרי-דעת | 27 |
೨೭ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.
עד בליעל יליץ משפט ופי רשעים יבלע-און | 28 |
೨೮ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.
נכונו ללצים שפטים ומהלמות לגו כסילים | 29 |
೨೯ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.