< מִשְׁלֵי 21 >
פלגי-מים לב-מלך ביד-יהוה על-כל-אשר יחפץ יטנו | 1 |
೧ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.
כל-דרך-איש ישר בעיניו ותכן לבות יהוה | 2 |
೨ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.
עשה צדקה ומשפט-- נבחר ליהוה מזבח | 3 |
೩ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.
רום-עינים ורחב-לב-- נר רשעים חטאת | 4 |
೪ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.
מחשבות חרוץ אך-למותר וכל-אץ אך-למחסור | 5 |
೫ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.
פעל אצרות בלשון שקר-- הבל נדף מבקשי-מות | 6 |
೬ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.
שד-רשעים יגורם כי מאנו לעשות משפט | 7 |
೭ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು.
הפכפך דרך איש וזר וזך ישר פעלו | 8 |
೮ದೋಷಿಯ ದಾರಿ ಡೊಂಕು; ಶುದ್ಧನ ನಡತೆ ಸರಳ.
טוב לשבת על-פנת-גג-- מאשת מדינים ובית חבר | 9 |
೯ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
נפש רשע אותה-רע לא-יחן בעיניו רעהו | 10 |
೧೦ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.
בענש-לץ יחכם-פתי ובהשכיל לחכם יקח-דעת | 11 |
೧೧ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.
משכיל צדיק לבית רשע מסלף רשעים לרע | 12 |
೧೨ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು.
אטם אזנו מזעקת-דל-- גם-הוא יקרא ולא יענה | 13 |
೧೩ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
מתן בסתר יכפה-אף ושחד בחק חמה עזה | 14 |
೧೪ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.
שמחה לצדיק עשות משפט ומחתה לפעלי און | 15 |
೧೫ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು.
אדם--תועה מדרך השכל בקהל רפאים ינוח | 16 |
೧೬ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.
איש מחסור אהב שמחה אהב יין-ושמן לא יעשיר | 17 |
೧೭ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.
כפר לצדיק רשע ותחת ישרים בוגד | 18 |
೧೮ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು.
טוב שבת בארץ-מדבר-- מאשת מדונים (מדינים) וכעס | 19 |
೧೯ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು.
אוצר נחמד ושמן--בנוה חכם וכסיל אדם יבלענו | 20 |
೨೦ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
רדף צדקה וחסד-- ימצא חיים צדקה וכבוד | 21 |
೨೧ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು.
עיר גברים עלה חכם וירד עז מבטחה | 22 |
೨೨ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.
שמר פיו ולשונו-- שמר מצרות נפשו | 23 |
೨೩ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.
זד יהיר לץ שמו-- עושה בעברת זדון | 24 |
೨೪“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.
תאות עצל תמיתנו כי-מאנו ידיו לעשות | 25 |
೨೫ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.
כל-היום התאוה תאוה וצדיק יתן ולא יחשך | 26 |
೨೬ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.
זבח רשעים תועבה אף כי-בזמה יביאנו | 27 |
೨೭ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.
עד-כזבים יאבד ואיש שומע לנצח ידבר | 28 |
೨೮ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು.
העז איש רשע בפניו וישר הוא יכין דרכיו (יבין דרכו) | 29 |
೨೯ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ, ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.
אין חכמה ואין תבונה-- ואין עצה לנגד יהוה | 30 |
೩೦ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
סוס--מוכן ליום מלחמה וליהוה התשועה | 31 |
೩೧ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.