< מִשְׁלֵי 23 >
כי-תשב ללחום את-מושל-- בין תבין את-אשר לפניך | 1 |
೧ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು.
ושמת שכין בלעך-- אם-בעל נפש אתה | 2 |
೨ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಗಂಟಲಿಗೆ ಕತ್ತಿಹಾಕಿಕೋ.
אל-תתאו למטעמותיו והוא לחם כזבים | 3 |
೩ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ.
אל-תיגע להעשיר מבינתך חדל | 4 |
೪ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
התעוף (התעיף) עיניך בו ואיננו כי עשה יעשה-לו כנפים כנשר ועיף (יעוף) השמים | 5 |
೫ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
אל-תלחם--את-לחם רע עין ואל-תתאו למטעמתיו | 6 |
೬ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.
כי כמו שער בנפשו-- כן-הוא אכול ושתה יאמר לך ולבו בל-עמך | 7 |
೭ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
פתך-אכלת תקיאנה ושחת דבריך הנעימים | 8 |
೮ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ.
באזני כסיל אל-תדבר כי-יבוז לשכל מליך | 9 |
೯ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.
אל-תסג גבול עולם ובשדי יתומים אל-תבא | 10 |
೧೦ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.
כי-גאלם חזק הוא-יריב את-ריבם אתך | 11 |
೧೧ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.
הביאה למוסר לבך ואזנך לאמרי-דעת | 12 |
೧೨ಉಪದೇಶವನ್ನು ಮನಸ್ಸಿಗೆ ತೆಗೆದುಕೋ, ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು.
אל-תמנע מנער מוסר כי-תכנו בשבט לא ימות | 13 |
೧೩ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು.
אתה בשבט תכנו ונפשו משאול תציל (Sheol ) | 14 |
೧೪ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು. (Sheol )
בני אם-חכם לבך-- ישמח לבי גם-אני | 15 |
೧೫ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.
ותעלזנה כליותי-- בדבר שפתיך מישרים | 16 |
೧೬ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವುದು.
אל-יקנא לבך בחטאים כי אם-ביראת-יהוה כל-היום | 17 |
೧೭ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.
כי אם-יש אחרית ותקותך לא תכרת | 18 |
೧೮ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
שמע-אתה בני וחכם ואשר בדרך לבך | 19 |
೧೯ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು.
אל-תהי בסבאי-יין-- בזללי בשר למו | 20 |
೨೦ಕುಡುಕರಲ್ಲಿಯೂ, ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.
כי-סבא וזולל יורש וקרעים תלביש נומה | 21 |
೨೧ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.
שמע לאביך זה ילדך ואל-תבוז כי-זקנה אמך | 22 |
೨೨ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.
אמת קנה ואל-תמכר חכמה ומוסר ובינה | 23 |
೨೩ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.
גול (גיל) יגיל אבי צדיק יולד (ויולד) חכם וישמח- (ישמח-) בו | 24 |
೨೪ಧರ್ಮಿಯ ತಂದೆಯು ಅತಿ ಸಂತೋಷಪಡುವನು, ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.
ישמח-אביך ואמך ותגל יולדתך | 25 |
೨೫ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.
תנה-בני לבך לי ועיניך דרכי תרצנה (תצרנה) | 26 |
೨೬ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.
כי-שוחה עמקה זונה ובאר צרה נכריה | 27 |
೨೭ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ.
אף-היא כחתף תארב ובוגדים באדם תוסף | 28 |
೨೮ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.
למי אוי למי אבוי למי מדונים (מדינים) למי שיח-- למי פצעים חנם למי חכללות עינים | 29 |
೨೯ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?
למאחרים על-היין-- לבאים לחקר ממסך | 30 |
೩೦ಅವರು ಮಿಶ್ರಮದ್ಯಪಾನಾಸಕ್ತರಾಗಿ, ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ.
אל-תרא יין כי יתאדם כי-יתן בכיס (בכוס) עינו יתהלך במישרים | 31 |
೩೧ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ
אחריתו כנחש ישך וכצפעני יפרש | 32 |
೩೨ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ.
עיניך יראו זרות ולבך ידבר תהפכות | 33 |
೩೩ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು.
והיית כשכב בלב-ים וכשכב בראש חבל | 34 |
೩೪ನೀನು ಸಮುದ್ರದ ನಡುವೆಯಾಗಲಿ, ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ.
הכוני בל-חליתי-- הלמוני בל-ידעתי מתי אקיץ אוסיף אבקשנו עוד | 35 |
೩೫ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.