< מִשְׁלֵי 30 >
דברי אגור בן-יקה--המשא נאם הגבר לאיתיאל לאיתיאל ואכל | 1 |
೧ದೈವೋಕ್ತಿ. ಯಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು.
כי בער אנכי מאיש ולא-בינת אדם לי | 2 |
೨ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ.
ולא-למדתי חכמה ודעת קדשים אדע | 3 |
೩ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳಿವಳಿಕೆಯನ್ನು ಹೊಂದಿಲ್ಲ.
מי עלה-שמים וירד מי אסף-רוח בחפניו מי צרר-מים בשמלה-- מי הקים כל-אפסי-ארץ מה-שמו ומה-שם-בנו כי תדע | 4 |
೪ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.
כל-אמרת אלוה צרופה מגן הוא לחסים בו | 5 |
೫ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.
אל-תוסף על-דבריו פן-יוכיח בך ונכזבת | 6 |
೬ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.
שתים שאלתי מאתך אל-תמנע ממני בטרם אמות | 7 |
೭ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.
שוא ודבר-כזב הרחק ממני-- ראש ועשר אל-תתן-לי הטריפני לחם חקי | 8 |
೮ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
פן אשבע וכחשתי-- ואמרתי מי יהוה ופן-אורש וגנבתי ותפשתי שם אלהי | 9 |
೯ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.
אל-תלשן עבד אל-אדנו פן-יקללך ואשמת | 10 |
೧೦ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.
דור אביו יקלל ואת-אמו לא יברך | 11 |
೧೧ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.
דור טהור בעיניו ומצאתו לא רחץ | 12 |
೧೨ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.
דור מה-רמו עיניו ועפעפיו ינשאו | 13 |
೧೩ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.
דור חרבות שניו-- ומאכלות מתלעתיו לאכל עניים מארץ ואביונים מאדם | 14 |
೧೪ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.
לעלוקה שתי בנות-- הב הב שלוש הנה לא תשבענה ארבע לא-אמרו הון | 15 |
೧೫ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.
שאול ועצר-רחם ארץ לא-שבעה מים ואש לא-אמרה הון (Sheol ) | 16 |
೧೬ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ. (Sheol )
עין תלעג לאב-- ותבז ליקהת-אם יקרוה ערבי-נחל ויאכלוה בני-נשר | 17 |
೧೭ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
שלשה המה נפלאו ממני וארבע (וארבעה) לא ידעתים | 18 |
೧೮ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು;
דרך הנשר בשמים-- דרך נחש עלי-צור דרך-אניה בלב-ים-- ודרך גבר בעלמה | 19 |
೧೯ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
כן דרך אשה-- מנאפת אכלה ומחתה פיה ואמרה לא-פעלתי און | 20 |
೨೦ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.
תחת שלוש רגזה ארץ ותחת ארבע לא-תוכל שאת | 21 |
೨೧ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.
תחת-עבד כי ימלוך ונבל כי ישבע-לחם | 22 |
೨೨ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,
תחת שנואה כי תבעל ושפחה כי תירש גברתה | 23 |
೨೩ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.
ארבעה הם קטני-ארץ והמה חכמים מחכמים | 24 |
೨೪ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.
הנמלים עם לא-עז ויכינו בקיץ לחמם | 25 |
೨೫ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.
שפנים עם לא-עצום וישימו בסלע ביתם | 26 |
೨೬ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.
מלך אין לארבה ויצא חצץ כלו | 27 |
೨೭ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.
שממית בידים תתפש והיא בהיכלי מלך | 28 |
೨೮ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.
שלשה המה מיטיבי צעד וארבעה מיטבי לכת | 29 |
೨೯ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.
ליש גבור בבהמה ולא-ישוב מפני-כל | 30 |
೩೦ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,
זרזיר מתנים או-תיש ומלך אלקום עמו | 31 |
೩೧ಹೆಮ್ಮೆಯಿಂದ ನಡೆಯುವ ಹುಂಜ, ಹೋತವು ಸಹ, ಸೈನ್ಯಸಮೇತನಾದ ರಾಜ.
אם-נבלת בהתנשא ואם-זמות יד לפה | 32 |
೩೨ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ.
כי מיץ חלב יוציא חמאה-- ומיץ-אף יוציא דם ומיץ אפים יוציא ריב | 33 |
೩೩ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.