< מִשְׁלֵי 5 >
בני לחכמתי הקשיבה לתבונתי הט-אזנך | 1 |
೧ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು.
לשמר מזמות ודעת שפתיך ינצרו | 2 |
೨ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು.
כי נפת תטפנה שפתי זרה וחלק משמן חכה | 3 |
೩ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.
ואחריתה מרה כלענה חדה כחרב פיות | 4 |
೪ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.
רגליה ירדות מות שאול צעדיה יתמכו (Sheol ) | 5 |
೫ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು. (Sheol )
ארח חיים פן-תפלס נעו מעגלתיה לא תדע | 6 |
೬ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ.
ועתה בנים שמעו-לי ואל-תסורו מאמרי-פי | 7 |
೭ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳಿಂದ ದೂರವಾಗಿರಬೇಡ.
הרחק מעליה דרכך ואל-תקרב אל-פתח ביתה | 8 |
೮ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!
פן-תתן לאחרים הודך ושנתיך לאכזרי | 9 |
೯ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು, ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.
פן-ישבעו זרים כחך ועצביך בבית נכרי | 10 |
೧೦ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ.
ונהמת באחריתך בכלות בשרך ושארך | 11 |
೧೧ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,
ואמרת--איך שנאתי מוסר ותוכחת נאץ לבי | 12 |
೧೨“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
ולא-שמעתי בקול מורי ולמלמדי לא-הטיתי אזני | 13 |
೧೩ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!
כמעט הייתי בכל-רע-- בתוך קהל ועדה | 14 |
೧೪ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ.
שתה-מים מבורך ונזלים מתוך בארך | 15 |
೧೫ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.
יפוצו מעינתיך חוצה ברחבות פלגי-מים | 16 |
೧೬ನಿನ್ನ ಒರತೆಗಳು ಬಯಲಿನಲ್ಲಿಯೂ, ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ?
יהיו-לך לבדך ואין לזרים אתך | 17 |
೧೭ಅವು ನಿನಗೊಬ್ಬನಿಗೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು.
יהי-מקורך ברוך ושמח מאשת נעורך | 18 |
೧೮ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.
אילת אהבים ויעלת-חן דדיה ירוך בכל-עת באהבתה תשגה תמיד | 19 |
೧೯ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
ולמה תשגה בני בזרה ותחבק חק נכריה | 20 |
೨೦ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?
כי נכח עיני יהוה--דרכי-איש וכל-מעגלתיו מפלס | 21 |
೨೧ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.
עוונתיו--ילכדנו את-הרשע ובחבלי חטאתו יתמך | 22 |
೨೨ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.
הוא--ימות באין מוסר וברב אולתו ישגה | 23 |
೨೩ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.