< מִשְׁלֵי 7 >
בני שמר אמרי ומצותי תצפן אתך | 1 |
೧ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.
שמר מצותי וחיה ותורתי כאישון עיניך | 2 |
೨ನನ್ನ ಉಪದೇಶವನ್ನು ಕಣ್ಣುಗುಡ್ಡೆಯಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು.
קשרם על-אצבעתיך כתבם על-לוח לבך | 3 |
೩ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ.
אמר לחכמה אחתי את ומדע לבינה תקרא | 4 |
೪ಜ್ಞಾನವನ್ನು, “ನೀನು ನನ್ನ ಅಕ್ಕಾ” ಎಂದು ಹೇಳು, ವಿವೇಕವನ್ನು, “ಪ್ರಿಯೇ” ಎಂದು ಕರೆ.
לשמרך מאשה זרה מנכריה אמריה החליקה | 5 |
೫ಅವು ಜಾರಳಿಂದ ಮತ್ತು ಸವಿಮಾತನಾಡುವ ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು.
כי בחלון ביתי-- בעד אשנבי נשקפתי | 6 |
೬ನಾನು ನನ್ನ ಮನೆಯ ಕಿಟಕಿಯ ಜಾಲರಿಯಿಂದ ಇಣಿಕಿ ನೋಡಲು
וארא בפתאים אבינה בבנים-- נער חסר-לב | 7 |
೭ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.
עבר בשוק אצל פנה ודרך ביתה יצעד | 8 |
೮ಅವನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ,
בנשף-בערב יום באישון לילה ואפלה | 9 |
೯ಅವಳ ಮನೆಯ ಹತ್ತಿರ ಬೀದಿಯಲ್ಲಿ ಹಾದುಹೋಗುತ್ತಾ, ಅವಳ ಮನೆಯ ಕಡೆಗೆ ತಿರುಗಿದ್ದನ್ನು ಕಂಡೆನು.
והנה אשה לקראתו שית זונה ונצרת לב | 10 |
೧೦ಇಗೋ ವೇಶ್ಯಾರೂಪವನ್ನು ಧರಿಸಿಕೊಂಡಿದ್ದ ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು.
המיה היא וסררת בביתה לא-ישכנו רגליה | 11 |
೧೧ಇವಳು ಕೂಗಾಟದವಳು, ಹಟಮಾರಿ, ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ;
פעם בחוץ--פעם ברחבות ואצל כל-פנה תארב | 12 |
೧೨ಒಂದು ವೇಳೆ ಬೀದಿಗಳಲ್ಲಿರುವಳು, ಮತ್ತೊಂದು ವೇಳೆ ಚೌಕಗಳಲ್ಲಿರುವಳು, ಅಂತು ಪ್ರತಿಯೊಂದು ಮೂಲೆಯಲ್ಲಿಯೂ ಹೊಂಚು ಹಾಕುವಳು.
והחזיקה בו ונשקה לו העזה פניה ותאמר לו | 13 |
೧೩ಅವನನ್ನು ಹಿಡಿದು, ಮುದ್ದಾಡಿ ನಾಚಿಕೆಗೆಟ್ಟವಳಾಗಿ,
זבחי שלמים עלי היום שלמתי נדרי | 14 |
೧೪“ಎಲೈ, ಈ ದಿನ ನನ್ನ ಹರಕೆಗಳನ್ನು ಸಲ್ಲಿಸಿದ್ದೇನೆ, ಸಮಾಧಾನ ಯಜ್ಞಶೇಷವು ನನ್ನಲ್ಲಿದೆ,
על-כן יצאתי לקראתך לשחר פניך ואמצאך | 15 |
೧೫ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು.
מרבדים רבדתי ערשי חטבות אטון מצרים | 16 |
೧೬ನನ್ನ ಮಂಚದಲ್ಲಿ ಸುಪ್ಪತ್ತಿಯನ್ನೂ, ಐಗುಪ್ತದೇಶದ ನೂಲಿನ ವಿಚಿತ್ರ ವಸ್ತ್ರಗಳನ್ನೂ ಹಾಸಿದ್ದೇನೆ.
נפתי משכבי-- מר אהלים וקנמון | 17 |
೧೭ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ.
לכה נרוה דדים עד-הבקר נתעלסה באהבים | 18 |
೧೮ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, ಕಾಮವಿಲಾಸಗಳಿಂದ ಸಂತೋಷಿಸುವ.
כי אין האיש בביתו הלך בדרך מרחוק | 19 |
೧೯ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ.
צרור-הכסף לקח בידו ליום הכסא יבא ביתו | 20 |
೨೦ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು” ಎಂದು ಹೇಳುವಳು.
הטתו ברב לקחה בחלק שפתיה תדיחנו | 21 |
೨೧ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ.
הולך אחריה פתאם כשור אל-טבח יבא וכעכס אל-מוסר אויל | 22 |
೨೨ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ,
עד יפלח חץ כבדו-- כמהר צפור אל-פח ולא-ידע כי-בנפשו הוא | 23 |
೨೩ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
ועתה בנים שמעו-לי והקשיבו לאמרי-פי | 24 |
೨೪ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.
אל-ישט אל-דרכיה לבך אל-תתע בנתיבותיה | 25 |
೨೫ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ.
כי-רבים חללים הפילה ועצמים כל-הרגיה | 26 |
೨೬ಅವಳಿಂದ ಗಾಯಪಟ್ಟು ಬಿದ್ದವರು ಬಹು ಜನರು, ಹತರಾದವರೋ ಲೆಕ್ಕವೇ ಇಲ್ಲ.
דרכי שאול ביתה ירדות אל-חדרי-מות (Sheol ) | 27 |
೨೭ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ. (Sheol )