< מִשְׁלֵי 8 >
הלא-חכמה תקרא ותבונה תתן קולה | 1 |
೧ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ?
בראש-מרמים עלי-דרך בית נתיבות נצבה | 2 |
೨ಆಕೆಯು ರಾಜಮಾರ್ಗಗಳ ಮುಖ್ಯಸ್ಥಾನದಲ್ಲಿ, ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ ನಿಂತುಕೊಳ್ಳುತ್ತಾಳೆ.
ליד-שערים לפי-קרת מבוא פתחים תרנה | 3 |
೩ಆಕೆ ಪಟ್ಟಣದ ಪ್ರವೇಶ ದ್ವಾರದಲ್ಲಿ, ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ,
אליכם אישים אקרא וקולי אל-בני אדם | 4 |
೪“ಜನರೇ, ನಿಮ್ಮನ್ನೇ ಕರೆಯುತ್ತೇನೆ, ಮಾನವರಿಗಾಗಿಯೇ ಧ್ವನಿಗೈಯುತ್ತೇನೆ.
הבינו פתאים ערמה וכסילים הבינו לב | 5 |
೫ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.
שמעו כי-נגידים אדבר ומפתח שפתי מישרים | 6 |
೬ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು,
כי-אמת יהגה חכי ותועבת שפתי רשע | 7 |
೭ನನ್ನ ಬಾಯಿ ಸತ್ಯವನ್ನೇ ಆಡುವುದು, ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ.
בצדק כל-אמרי-פי אין בהם נפתל ועקש | 8 |
೮ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ, ವಕ್ರತೆಯೂ ಇಲ್ಲ.
כלם נכחים למבין וישרים למצאי דעת | 9 |
೯ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು.
קחו-מוסרי ואל-כסף ודעת מחרוץ נבחר | 10 |
೧೦ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.
כי-טובה חכמה מפנינים וכל-חפצים לא ישוו-בה | 11 |
೧೧ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
אני-חכמה שכנתי ערמה ודעת מזמות אמצא | 12 |
೧೨ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ.
יראת יהוה שנאת-רע גאה וגאון ודרך רע ופי תהפכות שנאתי | 13 |
೧೩ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
לי-עצה ותושיה אני בינה לי גבורה | 14 |
೧೪ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ.
בי מלכים ימלכו ורזנים יחקקו צדק | 15 |
೧೫ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.
בי שרים ישרו ונדיבים כל-שפטי צדק | 16 |
೧೬ನನ್ನ ಮೂಲಕ ಪ್ರಭುಗಳು, ನಾಯಕರು ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು.
אני אהביה (אהבי) אהב ומשחרי ימצאנני | 17 |
೧೭ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
עשר-וכבוד אתי הון עתק וצדקה | 18 |
೧೮ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, ನೀತಿಯೂ ಇರುತ್ತವೆ.
טוב פריי מחרוץ ומפז ותבואתי מכסף נבחר | 19 |
೧೯ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ. ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.
בארח-צדקה אהלך בתוך נתיבות משפט | 20 |
೨೦ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.
להנחיל אהבי יש ואצרתיהם אמלא | 21 |
೨೧ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, ಅವರ ಬೊಕ್ಕಸಗಳನ್ನು ತುಂಬಿಸುವೆನು.
יהוה--קנני ראשית דרכו קדם מפעליו מאז | 22 |
೨೨ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ.
מעולם נסכתי מראש-- מקדמי-ארץ | 23 |
೨೩ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು.
באין-תהמות חוללתי באין מעינות נכבדי-מים | 24 |
೨೪ಜಲನಿಧಿಗಳಾಗಲಿ, ನೀರು ತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು.
בטרם הרים הטבעו לפני גבעות חוללתי | 25 |
೨೫ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ,
עד-לא עשה ארץ וחוצות וראש עפרות תבל | 26 |
೨೬ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು.
בהכינו שמים שם אני בחקו חוג על-פני תהום | 27 |
೨೭ಆತನು ಸಾಗರದ ಮೇಲೆ ಚಕ್ರಾಕಾರವಾದ ಗೆರೆಯನ್ನು ಎಳೆದು, ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು.
באמצו שחקים ממעל בעזוז עינות תהום | 28 |
೨೮ಆತನು ಗಗನವನ್ನು ಮೇಲೆ ಸ್ಥಿರಪಡಿಸಿ, ಸಾಗರದ ಬುಗ್ಗೆಗಳನ್ನು ನೆಲೆಗೊಳಿಸಿದನು.
בשומו לים חקו ומים לא יעברו-פיו בחוקו מוסדי ארץ | 29 |
೨೯ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ,
ואהיה אצלו אמון ואהיה שעשועים יום יום משחקת לפניו בכל-עת | 30 |
೩೦ನಾನು ಆತನ ಹತ್ತಿರ ಶಿಲ್ಪಿಯಾಗಿದ್ದುಕೊಂಡು ಪ್ರತಿದಿನವೂ ಆನಂದಿಸುತ್ತಾ, ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ,
משחקת בתבל ארצו ושעשעי את-בני אדם | 31 |
೩೧ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ, ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು.
ועתה בנים שמעו-לי ואשרי דרכי ישמרו | 32 |
೩೨ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.
שמעו מוסר וחכמו ואל-תפרעו | 33 |
೩೩ನನ್ನ ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ.
אשרי אדם שמע-לי לשקד על-דלתתי יום יום--לשמר מזוזת פתחי | 34 |
೩೪ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.
כי מצאי מצאי (מצא) חיים ויפק רצון מיהוה | 35 |
೩೫ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.
וחטאי חמס נפשו כל-משנאי אהבו מות | 36 |
೩೬ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”