< תהילים 1 >
אשרי האיש-- אשר לא הלך בעצת רשעים ובדרך חטאים לא עמד ובמושב לצים לא ישב | 1 |
೧ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
כי אם בתורת יהוה חפצו ובתורתו יהגה יומם ולילה | 2 |
೨ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.
והיה-- כעץ שתול על-פלגי-מים אשר פריו יתן בעתו--ועלהו לא-יבול וכל אשר-יעשה יצליח | 3 |
೩ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.
לא-כן הרשעים כי אם-כמץ אשר-תדפנו רוח | 4 |
೪ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.
על-כן לא-יקמו רשעים--במשפט וחטאים בעדת צדיקים | 5 |
೫ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.
כי-יודע יהוה דרך צדיקים ודרך רשעים תאבד | 6 |
೬ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.