< תהילים 102 >
תפלה לעני כי-יעטף-- ולפני יהוה ישפך שיחו ב יהוה שמעה תפלתי ושועתי אליך תבוא | 1 |
೧ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಕೂಗು ನಿನಗೆ ಮುಟ್ಟಲಿ.
אל-תסתר פניך ממני-- ביום צר-לי הטה-אלי אזנך ביום אקרא מהר ענני | 2 |
೨ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು.
כי-כלו בעשן ימי ועצמותי כמוקד נחרו | 3 |
೩ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ; ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟುಹೋಗುತ್ತವೆ.
הוכה-כעשב ויבש לבי כי-שכחתי מאכל לחמי | 4 |
೪ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.
מקול אנחתי-- דבקה עצמי לבשרי | 5 |
೫ನಿಟ್ಟುಸಿರಿನಿಂದ ನನ್ನಲ್ಲಿ ಎಲುಬು, ತೊಗಲು ಮಾತ್ರ ಉಳಿದಿರುತ್ತವೆ.
דמיתי לקאת מדבר הייתי ככוס חרבות | 6 |
೬ಅಡವಿಯ ಬಕಪಕ್ಷಿಯಂತಿದ್ದೇನೆ; ಹಾಳೂರಿನ ಗೂಬೆಯಂತಿದ್ದೇನೆ.
שקדתי ואהיה-- כצפור בודד על-גג | 7 |
೭ನಿದ್ರೆಯಿಲ್ಲದವನಾಗಿ ಮನೆಮಾಳಿಗೆಯ ಮೇಲಿರುವ, ಒಂಟಿಯಾದ ಪಕ್ಷಿಯಂತಿದ್ದೇನೆ.
כל-היום חרפוני אויבי מהוללי בי נשבעו | 8 |
೮ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ, ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.
כי-אפר כלחם אכלתי ושקוי בבכי מסכתי | 9 |
೯ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು.
מפני-זעמך וקצפך-- כי נשאתני ותשליכני | 10 |
೧೦ಇದಕ್ಕೆಲ್ಲಾ ನಿನ್ನ ಕೋಪ, ರೌದ್ರಗಳೇ ಕಾರಣ, ನೀನು ನನ್ನನ್ನು ಎತ್ತಿ ಒಗೆದುಬಿಟ್ಟಿದ್ದಿಯಲ್ಲಾ!
ימי כצל נטוי ואני כעשב איבש | 11 |
೧೧ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿಹೋದ ಹುಲ್ಲಿನಂತಿದ್ದೇನೆ.
ואתה יהוה לעולם תשב וזכרך לדר ודר | 12 |
೧೨ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವುದು.
אתה תקום תרחם ציון כי-עת לחננה כי-בא מועד | 13 |
೧೩ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯಮಿತ ಕಾಲವು ಬಂದಿದೆ.
כי-רצו עבדיך את-אבניה ואת-עפרה יחננו | 14 |
೧೪ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ, ಅದು ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.
וייראו גוים את-שם יהוה וכל-מלכי הארץ את-כבודך | 15 |
೧೫ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ,
כי-בנה יהוה ציון-- נראה בכבודו | 16 |
೧೬ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ,
פנה אל-תפלת הערער ולא-בזה את-תפלתם | 17 |
೧೭ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.
תכתב זאת לדור אחרון ועם נברא יהלל-יה | 18 |
೧೮ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ, ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ,
כי-השקיף ממרום קדשו יהוה משמים אל-ארץ הביט | 19 |
೧೯“ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ.
לשמע אנקת אסיר לפתח בני תמותה | 20 |
೨೦ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ,
לספר בציון שם יהוה ותהלתו בירושלם | 21 |
೨೧ಅವರು ಚೀಯೋನಿನಲ್ಲಿ ಯೆಹೋವನ ನಾಮವನ್ನು ವರ್ಣಿಸುವಂತೆಯೂ, ಯೆರೂಸಲೇಮಿನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ.
בהקבץ עמים יחדו וממלכות לעבד את-יהוה | 22 |
೨೨ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು.
ענה בדרך כחו (כחי) קצר ימי | 23 |
೨೩ಆತನು ಯೌವನಪ್ರಾಯದಲ್ಲಿಯೇ ನನ್ನ ಬಲವನ್ನು ಕುಂದಿಸಿದ್ದಾನೆ;
אמר--אלי אל תעלני בחצי ימי בדור דורים שנותיך | 24 |
೨೪ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ. ಆದುದರಿಂದ, “ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರ್ಷಗಳು ತಲತಲಾಂತರಕ್ಕೂ ಇರುತ್ತವೆ.
לפנים הארץ יסדת ומעשה ידיך שמים | 25 |
೨೫ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.
המה יאבדו-- ואתה תעמד וכלם כבגד יבלו כלבוש תחליפם ויחלפו | 26 |
೨೬ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.
ואתה-הוא ושנותיך לא יתמו | 27 |
೨೭ನೀನಾದರೋ ಏಕರೀತಿಯಾಗಿರುತ್ತಿ; ನಿನ್ನ ವರ್ಷಗಳು ಮುಗಿದುಹೋಗುವುದಿಲ್ಲ.
בני-עבדיך ישכונו וזרעם לפניך יכון | 28 |
೨೮ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು” ಎಂದು ಮೊರೆಯಿಡುತ್ತೇನೆ.