< תהילים 106 >

הללו-יה הודו ליהוה כי-טוב-- כי לעולם חסדו 1
ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
מי--ימלל גבורות יהוה ישמיע כל-תהלתו 2
ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?
אשרי שמרי משפט עשה צדקה בכל-עת 3
ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.
זכרני יהוה ברצון עמך פקדני בישועתך 4
ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,
לראות בטובת בחיריך-- לשמח בשמחת גויך להתהלל עם-נחלתך 5
ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.
חטאנו עם-אבותינו העוינו הרשענו 6
ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.
אבותינו במצרים לא-השכילו נפלאותיך-- לא זכרו את-רב חסדיך וימרו על-ים בים-סוף 7
ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.
ויושיעם למען שמו-- להודיע את-גבורתו 8
ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.
ויגער בים-סוף ויחרב ויוליכם בתהמות כמדבר 9
ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.
ויושיעם מיד שונא ויגאלם מיד אויב 10
೧೦ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಯ ಹಸ್ತದಿಂದ ಬಿಡಿಸಿದನು.
ויכסו-מים צריהם אחד מהם לא נותר 11
೧೧ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; ಒಬ್ಬನೂ ಉಳಿಯಲಿಲ್ಲ.
ויאמינו בדבריו ישירו תהלתו 12
೧೨ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು.
מהרו שכחו מעשיו לא-חכו לעצתו 13
೧೩ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,
ויתאוו תאוה במדבר וינסו-אל בישימון 14
೧೪ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.
ויתן להם שאלתם וישלח רזון בנפשם 15
೧೫ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.
ויקנאו למשה במחנה לאהרן קדוש יהוה 16
೧೬ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,
תפתח-ארץ ותבלע דתן ותכס על-עדת אבירם 17
೧೭ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು.
ותבער-אש בעדתם להבה תלהט רשעים 18
೧೮ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.
יעשו-עגל בחרב וישתחוו למסכה 19
೧೯ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು.
וימירו את-כבודם בתבנית שור אכל עשב 20
೨೦ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು, ಹುಲ್ಲು ತಿನ್ನುವ ಎತ್ತಿನ ಮೂರ್ತಿಯನ್ನು ಹಿಡಿದುಕೊಂಡರು.
שכחו אל מושיעם-- עשה גדלות במצרים 21
೨೧ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,
נפלאות בארץ חם נוראות על-ים-סוף 22
೨೨ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು.
ויאמר להשמידם לולי משה בחירו-- עמד בפרץ לפניו להשיב חמתו מהשחית 23
೨೩ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.
וימאסו בארץ חמדה לא-האמינו לדברו 24
೨೪ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.
וירגנו באהליהם לא שמעו בקול יהוה 25
೨೫ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.
וישא ידו להם-- להפיל אותם במדבר 26
೨೬ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ,
ולהפיל זרעם בגוים ולזרותם בארצות 27
೨೭ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.
ויצמדו לבעל פעור ויאכלו זבחי מתים 28
೨೮ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.
ויכעיסו במעלליהם ותפרץ-בם מגפה 29
೨೯ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.
ויעמד פינחס ויפלל ותעצר המגפה 30
೩೦ಫೀನೆಹಾಸನು ಎದ್ದು ಅವರನ್ನು ದಂಡಿಸಲು, ಆ ವ್ಯಾಧಿಯು ನಿಂತುಹೋಯಿತು.
ותחשב לו לצדקה לדר ודר עד-עולם 31
೩೧ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು.
ויקציפו על-מי מריבה וירע למשה בעבורם 32
೩೨ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.
כי-המרו את-רוחו ויבטא בשפתיו 33
೩೩ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ, ಮೋಶೆ ದುಡುಕಿ ಮಾತನಾಡಿದನು.
לא-השמידו את-העמים-- אשר אמר יהוה להם 34
೩೪ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, ಯೆಹೋವನ ಆಜ್ಞೆಗೆ ಅವಿಧೇಯರಾಗಿ,
ויתערבו בגוים וילמדו מעשיהם 35
೩೫ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು.
ויעבדו את-עצביהם ויהיו להם למוקש 36
೩೬ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.
ויזבחו את-בניהם ואת-בנותיהם-- לשדים 37
೩೭ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು.
וישפכו דם נקי דם-בניהם ובנותיהם-- אשר זבחו לעצבי כנען ותחנף הארץ בדמים 38
೩೮ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.
ויטמאו במעשיהם ויזנו במעלליהם 39
೩೯ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.
ויחר-אף יהוה בעמו ויתעב את-נחלתו 40
೪೦ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,
ויתנם ביד-גוים וימשלו בהם שנאיהם 41
೪೧ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;
וילחצום אויביהם ויכנעו תחת ידם 42
೪೨ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.
פעמים רבות יצילם והמה ימרו בעצתם וימכו בעונם 43
೪೩ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.
וירא בצר להם-- בשמעו את-רנתם 44
೪೪ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.
ויזכר להם בריתו וינחם כרב חסדו 45
೪೫ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
ויתן אותם לרחמים-- לפני כל-שוביהם 46
೪೬ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.
הושיענו יהוה אלהינו וקבצנו מן-הגוים להדות לשם קדשך להשתבח בתהלתך 47
೪೭ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.
ברוך יהוה אלהי ישראל מן-העולם ועד העולם-- ואמר כל-העם אמן הללו-יה 48
೪೮ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ “ಆಮೆನ್” ಎನ್ನಲಿ. ಯೆಹೋವನಿಗೆ ಸ್ತೋತ್ರ!

< תהילים 106 >