< תהילים 106 >
הללו-יה הודו ליהוה כי-טוב-- כי לעולם חסדו | 1 |
ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.
מי--ימלל גבורות יהוה ישמיע כל-תהלתו | 2 |
ಯೆಹೋವ ದೇವರ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸಿರಿ, ದೇವರನ್ನು ತಕ್ಕಂತೆ ಸ್ತುತಿಸುವವರು ಯಾರಿಗೆ ಸಾಧ್ಯ?
אשרי שמרי משפט עשה צדקה בכל-עת | 3 |
ನ್ಯಾಯವನ್ನು ಕಾಪಾಡಿಕೊಂಡು ಯಾವಾಗಲೂ ಸರಿಯಾದವುಗಳನ್ನು ಪಾಲಿಸುವವರು ಧನ್ಯರು.
זכרני יהוה ברצון עמך פקדני בישועתך | 4 |
ದೇವರೇ, ನಿಮ್ಮ ಜನರ ಮೇಲಿರುವ ಮೆಚ್ಚುಗೆಯಿಂದ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ, ನಿಮ್ಮ ರಕ್ಷಣೆಯಿಂದ ನನ್ನನ್ನು ದರ್ಶಿಸಿರಿ.
לראות בטובת בחיריך-- לשמח בשמחת גויך להתהלל עם-נחלתך | 5 |
ಯೆಹೋವ ದೇವರೇ, ನಾನು ನೀವು ಆಯ್ದುಕೊಂಡವರ ಸುಖವನ್ನು ಕಂಡು, ನಿಮ್ಮ ಜನರ ಸಂತೋಷದೊಂದಿಗೆ ಸಂತೋಷಿಸಿ, ನಿಮ್ಮ ಸ್ವಕೀಯರ ಸಂಗಡ ಹೊಗಳಿಕೊಳ್ಳುವೆನು.
חטאנו עם-אבותינו העוינו הרשענו | 6 |
ನಮ್ಮ ಪಿತೃಗಳಂತೆ ನಾವು ಕೂಡಾ ಪಾಪಮಾಡಿದ್ದೇವೆ; ಅಕ್ರಮ ಮಾಡಿದ್ದೇವೆ; ದುಷ್ಟಕೃತ್ಯಗಳನ್ನು ನಡೆಸಿದ್ದೇವೆ.
אבותינו במצרים לא-השכילו נפלאותיך-- לא זכרו את-רב חסדיך וימרו על-ים בים-סוף | 7 |
ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.
ויושיעם למען שמו-- להודיע את-גבורתו | 8 |
ಆದರೂ ದೇವರು ತಮ್ಮ ಮಹಾಶಕ್ತಿಯನ್ನು ಅವರಿಗೆ ತಿಳಿಯಮಾಡುವ ಹಾಗೆ, ತಮ್ಮ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದರು.
ויגער בים-סוף ויחרב ויוליכם בתהמות כמדבר | 9 |
ದೇವರು ಕೆಂಪು ಸಮುದ್ರವನ್ನು ಗದರಿಸಲು, ಅದು ಒಣಗಿ ಹೋಯಿತು; ಹೀಗೆ ಮರುಭೂಮಿಯಲ್ಲಿ ನಡೆದು ಹೋದಂತೆ ಜಲಾಗಾಧದಲ್ಲಿ ಇಸ್ರಾಯೇಲರನ್ನು ನಡೆಸಿದರು.
ויושיעם מיד שונא ויגאלם מיד אויב | 10 |
ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿದರು, ಶತ್ರುವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದರು.
ויכסו-מים צריהם אחד מהם לא נותר | 11 |
ಪ್ರವಾಹಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು, ವೈರಿಗಳಲ್ಲಿ ಒಬ್ಬನೂ ಉಳಿಯಲಿಲ್ಲ.
ויאמינו בדבריו ישירו תהלתו | 12 |
ಆಗ ಅವರು ದೇವರ ಮಾತುಗಳನ್ನು ನಂಬಿ, ದೇವರಿಗೆ ಸ್ತೋತ್ರವನ್ನು ಹಾಡಿದರು.
מהרו שכחו מעשיו לא-חכו לעצתו | 13 |
ಆದರೆ ಬೇಗನೇ ದೇವರು ಮಾಡಿದ ಕೆಲಸಗಳನ್ನು ಮರೆತುಬಿಟ್ಟು, ದೇವರ ಸಂಕಲ್ಪಕ್ಕೆ ಅವರು ಕಾದುಕೊಳ್ಳದೆ ಹೋದರು.
ויתאוו תאוה במדבר וינסו-אל בישימון | 14 |
ಮರುಭೂಮಿಯಲ್ಲಿ ದುರಾಶೆಯಿಂದ ಆಶಿಸಿ, ಹಾಳು ಪ್ರದೇಶದಲ್ಲಿ ದೇವರನ್ನು ಪರೀಕ್ಷಿಸಿದರು.
ויתן להם שאלתם וישלח רזון בנפשם | 15 |
ಆಗ ದೇವರು ಅವರ ಬೇಡಿಕೆಯಂತೆಯೇ ಅವರಿಗೆ ಕೊಟ್ಟುಬಿಟ್ಟರು; ಆದರೆ ಅವರ ದೇಹಕ್ಕೆ ಭೀಕರ ರೋಗವನ್ನು ಸಹ ಅನುಮತಿಸಿದರು.
ויקנאו למשה במחנה לאהרן קדוש יהוה | 16 |
ಇಸ್ರಾಯೇಲರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವ ದೇವರಿಗೆ ಪ್ರತಿಷ್ಠಿತನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.
תפתח-ארץ ותבלע דתן ותכס על-עדת אבירם | 17 |
ಆಗ ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ, ಅಬೀರಾಮನ ಗುಂಪನ್ನು ಮುಚ್ಚಿಬಿಟ್ಟಿತು.
ותבער-אש בעדתם להבה תלהט רשעים | 18 |
ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
יעשו-עגל בחרב וישתחוו למסכה | 19 |
ಅವರು ಹೋರೇಬಿನಲ್ಲಿ ಎರಕದ ಕರುವನ್ನು ಮಾಡಿ, ಆ ವಿಗ್ರಹಕ್ಕೆ ಅಡ್ಡಬಿದ್ದರು.
וימירו את-כבודם בתבנית שור אכל עשב | 20 |
ಹೀಗೆ ಅವರು ತಮ್ಮ ಮಹಿಮೆಯುಳ್ಳ ದೇವರನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
שכחו אל מושיעם-- עשה גדלות במצרים | 21 |
ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ,
נפלאות בארץ חם נוראות על-ים-סוף | 22 |
ಹಾಮ ದೇಶದಲ್ಲಿ ಅದ್ಭುತಗಳನ್ನೂ, ಕೆಂಪುಸಮುದ್ರದ ಬಳಿಯಲ್ಲಿ ಅತಿಶಯವಾದವುಗಳನ್ನೂ ಮಾಡಿದ ದೇವರನ್ನು ಮರೆತುಬಿಟ್ಟರು.
ויאמר להשמידם לולי משה בחירו-- עמד בפרץ לפניו להשיב חמתו מהשחית | 23 |
ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.
וימאסו בארץ חמדה לא-האמינו לדברו | 24 |
ಹೌದು, ಇಸ್ರಾಯೇಲರು ಮನೋಹರವಾದ ದೇಶವನ್ನು ಹೀನೈಸಿ, ದೇವರ ಮಾತನ್ನು ನಂಬದೆ ಹೋದರು.
וירגנו באהליהם לא שמעו בקול יהוה | 25 |
ತಮ್ಮ ಗುಡಾರಗಳಲ್ಲಿ ಗೊಣಗುಟ್ಟಿ ಯೆಹೋವ ದೇವರ ಮಾತನ್ನು ಹೇಳದೆ ಹೋದರು.
וישא ידו להם-- להפיל אותם במדבר | 26 |
ಆದ್ದರಿಂದ ದೇವರು ಅವರನ್ನು ಮರುಭೂಮಿಯಲ್ಲಿ ಬೀಳುವಂತೆಯೂ, ಅವರ ಸಂತತಿಯರು ದೇಶಗಳಲ್ಲಿ ಚದರಿಸುವಂತೆಯೂ
ולהפיל זרעם בגוים ולזרותם בארצות | 27 |
ತಮ್ಮ ಕೈಯನ್ನು ಎತ್ತಿ ಅವರಿಗೆ ಪ್ರಮಾಣ ಮಾಡಬೇಕಾಯಿತು.
ויצמדו לבעל פעור ויאכלו זבחי מתים | 28 |
ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು.
ויכעיסו במעלליהם ותפרץ-בם מגפה | 29 |
ತಮ್ಮ ಕ್ರಿಯೆಗಳಿಂದ ದೇವರನ್ನು ಅಸಂತೋಷಪಡಿಸಿದರು. ಆದ್ದರಿಂದ ವ್ಯಾಧಿಯು ಅವರಲ್ಲಿ ಹಬ್ಬಿತು.
ויעמד פינחס ויפלל ותעצר המגפה | 30 |
ಆಗ ಫೀನೆಹಾಸನು ಎದ್ದು ಬಂದು ದಂಡಿಸಿದ್ದರಿಂದ ವ್ಯಾಧಿ ನಿಂತುಹೋಯಿತು.
ותחשב לו לצדקה לדר ודר עד-עולם | 31 |
ಇದು ತಲತಲಾಂತರಕ್ಕೂ, ಯುಗಯುಗಕ್ಕೂ ಫೀನೆಹಾಸನಿಗೆ ನೀತಿ ಎಂದು ಎಣಿಸಲಾಯಿತು.
ויקציפו על-מי מריבה וירע למשה בעבורם | 32 |
ಮೆರೀಬಾದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಅಲ್ಲಿ ಅವರ ನಿಮಿತ್ತ ಮೋಶೆಗೆ ಕೇಡು ಬಂತು.
כי-המרו את-רוחו ויבטא בשפתיו | 33 |
ಏಕೆಂದರೆ ಇಸ್ರಾಯೇಲರು ದೇವರ ಆತ್ಮನಿಗೆ ತಿರುಗಿ ಬಿದ್ದದ್ದರಿಂದ, ಮೋಶೆ ದುಡುಕಿ ಮಾತನಾಡಿದನು.
לא-השמידו את-העמים-- אשר אמר יהוה להם | 34 |
ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ ಜನಗಳನ್ನು ಅವರು ದಂಡಿಸದೆ ಹೋದರು.
ויתערבו בגוים וילמדו מעשיהם | 35 |
ಆದರೆ ಇತರ ಜನಾಂಗಗಳ ಸಂಗಡ ಕೂಡಿಕೊಂಡು, ಅವರ ಪದ್ಧತಿಗಳನ್ನು ಕಲಿತುಕೊಂಡರು.
ויעבדו את-עצביהם ויהיו להם למוקש | 36 |
ಅವರ ವಿಗ್ರಹಗಳಿಗೆ ಆರಾಧನೆ ಮಾಡಿದರು; ಅವು ಅವರಿಗೆ ಉರುಲಿನಂತಾದವು.
ויזבחו את-בניהם ואת-בנותיהם-- לשדים | 37 |
ತಮ್ಮ ಗಂಡು ಮಕ್ಕಳನ್ನೂ, ಹೆಣ್ಣು ಮಕ್ಕಳನ್ನೂ ಸುಳ್ಳು ದೇವರುಗಳಿಗೆ ಬಲಿಕೊಟ್ಟರು.
וישפכו דם נקי דם-בניהם ובנותיהם-- אשר זבחו לעצבי כנען ותחנף הארץ בדמים | 38 |
ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.
ויטמאו במעשיהם ויזנו במעלליהם | 39 |
ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.
ויחר-אף יהוה בעמו ויתעב את-נחלתו | 40 |
ಆಗ ಯೆಹೋವ ದೇವರು ತಮ್ಮ ಜನರ ಮೇಲೆ ಬಹು ಬೇಸರಗೊಂಡರು. ದೇವರು ತಮ್ಮ ವಾರಸುದಾರರಾದ ಇಸ್ರಾಯೇಲರ ಮೇಲೆ ಅಸಂತೋಷಗೊಂಡು,
ויתנם ביד-גוים וימשלו בהם שנאיהם | 41 |
ಅವರನ್ನು ಇತರ ಜನಾಂಗಗಳ ಕೈಗೆ ಒಪ್ಪಿಸಿಕೊಟ್ಟರು. ಹೀಗೆ ಅವರ ವೈರಿಗಳು ಅವರನ್ನು ಆಳಿದರು.
וילחצום אויביהם ויכנעו תחת ידם | 42 |
ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅವರು ಅಧೀನರಾದರು.
פעמים רבות יצילם והמה ימרו בעצתם וימכו בעונם | 43 |
ಅನೇಕ ಸಾರಿ ದೇವರು ಇಸ್ರಾಯೇಲರನ್ನು ಬಿಡಿಸಿದರು, ಆದರೆ ಅವರು ತಿರುಗಿಬೀಳುತ್ತಲೇ ಇದ್ದರು; ತಮ್ಮ ಅಕ್ರಮದಿಂದಲೇ ಅವರು ಕುಗ್ಗಿಹೋದರು;
וירא בצר להם-- בשמעו את-רנתם | 44 |
ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ ಅವರ ಮೇಲೆ ಲಕ್ಷ್ಯವಿಟ್ಟು,
ויזכר להם בריתו וינחם כרב חסדו | 45 |
ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,
ויתן אותם לרחמים-- לפני כל-שוביהם | 46 |
ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.
הושיענו יהוה אלהינו וקבצנו מן-הגוים להדות לשם קדשך להשתבח בתהלתך | 47 |
ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.
ברוך יהוה אלהי ישראל מן-העולם ועד העולם-- ואמר כל-העם אמן הללו-יה | 48 |
ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. ನೀವು ಯೆಹೋವ ದೇವರನ್ನು ಸ್ತುತಿಸಿರಿ.