< תהילים 108 >
שיר מזמור לדוד נכון לבי אלהים אשירה ואזמרה אף-כבודי | 1 |
೧ದಾವೀದನ ಕೀರ್ತನೆ. ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ!
עורה הנבל וכנור אעירה שחר | 2 |
೨ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
אודך בעמים יהוה ואזמרך בלאמים | 3 |
೩ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
כי-גדול מעל-שמים חסדך ועד-שחקים אמתך | 4 |
೪ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ, ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ.
רומה על-שמים אלהים ועל כל-הארץ כבודך | 5 |
೫ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
למען יחלצון ידידיך הושיעה ימינך וענני | 6 |
೬ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು, ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
אלהים דבר בקדשו--אעלזה אחלקה שכם ועמק סכות אמדד | 7 |
೭ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳತೆಮಾಡಿ ಕೊಡುವೆನು.
לי גלעד לי מנשה ואפרים מעוז ראשי יהודה מחקקי | 8 |
೮ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು. ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.
מואב סיר רחצי--על-אדום אשליך נעלי עלי-פלשת אתרועע | 9 |
೯ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು.
מי יבלני עיר מבצר מי נחני עד-אדום | 10 |
೧೦ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
הלא-אלהים זנחתנו ולא-תצא אלהים בצבאתינו | 11 |
೧೧ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿಯಾ?
הבה-לנו עזרת מצר ושוא תשועת אדם | 12 |
೧೨ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ.
באלהים נעשה-חיל והוא יבוס צרינו | 13 |
೧೩ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.