< תהילים 108 >

שיר מזמור לדוד נכון לבי אלהים אשירה ואזמרה אף-כבודי 1
ಒಂದು ಗೀತೆ. ದಾವೀದನ ಕೀರ್ತನೆ. ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ಮನಃಪೂರ್ವಕವಾಗಿ ಹಾಡುತ್ತಾ, ನಿಮ್ಮ ಕೀರ್ತನೆಯನ್ನು ಮಾಡುವೆನು.
עורה הנבל וכנור אעירה שחר 2
ವೀಣೆಯೇ, ಕಿನ್ನರಿಯೇ ಎಚ್ಚರವಾಗಿರಿ, ನಾನು ಉದಯವನ್ನು ಎಚ್ಚರಗೊಳಿಸುವೆನು.
אודך בעמים יהוה ואזמרך בלאמים 3
ಯೆಹೋವ ದೇವರೇ, ಜನಾಂಗಗಳಲ್ಲಿ ನಾನು ನಿಮ್ಮನ್ನು ಕೊಂಡಾಡುವೆನು. ಜನರ ಮಧ್ಯದಲ್ಲಿ ನಿಮ್ಮನ್ನು ಹಾಡಿ ಕೊಂಡಾಡುವೆನು.
כי-גדול מעל-שמים חסדך ועד-שחקים אמתך 4
ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ.
רומה על-שמים אלהים ועל כל-הארץ כבודך 5
ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.
למען יחלצון ידידיך הושיעה ימינך וענני 6
ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ.
אלהים דבר בקדשו--אעלזה אחלקה שכם ועמק סכות אמדד 7
ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
לי גלעד לי מנשה ואפרים מעוז ראשי יהודה מחקקי 8
ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ.
מואב סיר רחצי--על-אדום אשליך נעלי עלי-פלשת אתרועע 9
ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”
מי יבלני עיר מבצר מי נחני עד-אדום 10
ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು?
הלא-אלהים זנחתנו ולא-תצא אלהים בצבאתינו 11
ದೇವರೇ, ಈಗ ನೀವು ನಮ್ಮ ಸೈನ್ಯಗಳ ಸಂಗಡ ಹೊರಡುವುದಿಲ್ಲವೋ ನಮ್ಮನ್ನು ಕೈಬಿಟ್ಟಿದ್ದೀರೋ?
הבה-לנו עזרת מצר ושוא תשועת אדם 12
ವೈರಿಗಳ ವಿರೋಧ ನಮಗೆ ಸಹಾಯಮಾಡಿರಿ. ಮನುಷ್ಯರ ಸಹಾಯವು ವ್ಯರ್ಥ.
באלהים נעשה-חיל והוא יבוס צרינו 13
ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು.

< תהילים 108 >