< תהילים 109 >
למנצח לדוד מזמור אלהי תהלתי אל-תחרש | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.
כי פי רשע ופי-מרמה--עלי פתחו דברו אתי לשון שקר | 2 |
೨ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ. ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ.
ודברי שנאה סבבוני וילחמוני חנם | 3 |
೩ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.
תחת-אהבתי ישטנוני ואני תפלה | 4 |
೪ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.
וישימו עלי רעה תחת טובה ושנאה תחת אהבתי | 5 |
೫ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.
הפקד עליו רשע ושטן יעמד על-ימינו | 6 |
೬ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.
בהשפטו יצא רשע ותפלתו תהיה לחטאה | 7 |
೭ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿ ಎಂದು ತೀರ್ಪುಹೊಂದಲಿ; ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ.
יהיו-ימיו מעטים פקדתו יקח אחר | 8 |
೮ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.
יהיו-בניו יתומים ואשתו אלמנה | 9 |
೯ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ.
ונוע ינועו בניו ושאלו ודרשו מחרבותיהם | 10 |
೧೦ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.
ינקש נושה לכל-אשר-לו ויבזו זרים יגיעו | 11 |
೧೧ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.
אל-יהי-לו משך חסד ואל-יהי חונן ליתומיו | 12 |
೧೨ಅವನಿಗೆ ಯಾರೂ ಕೃಪೆತೋರಿಸದಿರಲಿ, ದಿಕ್ಕಿಲ್ಲದ ಅವನ ಮಕ್ಕಳಿಗೆ ಯಾರೂ ದಯೆತೋರದಿರಲಿ,
יהי-אחריתו להכרית בדור אחר ימח שמם | 13 |
೧೩ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.
יזכר עון אבתיו--אל-יהוה וחטאת אמו אל-תמח | 14 |
೧೪ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.
יהיו נגד-יהוה תמיד ויכרת מארץ זכרם | 15 |
೧೫ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.
יען-- אשר לא זכר עשות חסד וירדף איש-עני ואביון--ונכאה לבב למותת | 16 |
೧೬ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.
ויאהב קללה ותבואהו ולא-חפץ בברכה ותרחק ממנו | 17 |
೧೭ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!
וילבש קללה כמדו ותבא כמים בקרבו וכשמן בעצמותיו | 18 |
೧೮ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ, ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ.
תהי-לו כבגד יעטה ולמזח תמיד יחגרה | 19 |
೧೯ಶಾಪವೇ ಅವನ ಹೊದಿಕೆಯಂತೆಯೂ, ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ.
זאת פעלת שטני מאת יהוה והדברים רע על-נפשי | 20 |
೨೦ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ.
ואתה יהוה אדני-- עשה-אתי למען שמך כי-טוב חסדך הצילני | 21 |
೨೧ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.
כי-עני ואביון אנכי ולבי חלל בקרבי | 22 |
೨೨ನಾನು ಬಡವನೂ, ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.
כצל-כנטותו נהלכתי ננערתי כארבה | 23 |
೨೩ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಿದ್ದೇನೆ.
ברכי כשלו מצום ובשרי כחש משמן | 24 |
೨೪ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.
ואני הייתי חרפה להם יראוני יניעון ראשם | 25 |
೨೫ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.
עזרני יהוה אלהי הושיעני כחסדך | 26 |
೨೬ಯೆಹೋವನೇ, ನನ್ನ ದೇವರೇ, ಸಹಾಯಮಾಡು; ನಿನ್ನ ಕೃಪೆಗೆ ತಕ್ಕಂತೆ ರಕ್ಷಿಸು.
וידעו כי-ידך זאת אתה יהוה עשיתה | 27 |
೨೭ಆಗ ಅವರು ಇದು ನಿನ್ನ ಕೈಕೆಲಸವೆಂದೂ, ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು.
יקללו-המה ואתה תברך קמו ויבשו--ועבדך ישמח | 28 |
೨೮ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನ ಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.
ילבשו שוטני כלמה ויעטו כמעיל בשתם | 29 |
೨೯ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.
אודה יהוה מאד בפי ובתוך רבים אהללנו | 30 |
೩೦ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು.
כי-יעמד לימין אביון-- להושיע משפטי נפשו | 31 |
೩೧ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.