< תהילים 110 >
לדוד מזמור נאם יהוה לאדני--שב לימיני עד-אשית איביך הדם לרגליך | 1 |
೧ದಾವೀದನ ಕೀರ್ತನೆ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.
מטה-עזך--ישלח יהוה מציון רדה בקרב איביך | 2 |
೨ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.
עמך נדבת ביום חילך בהדרי-קדש מרחם משחר לך טל ילדתיך | 3 |
೩ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.
נשבע יהוה ולא ינחם-- אתה-כהן לעולם על-דברתי מלכי-צדק | 4 |
೪“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.
אדני על-ימינך מחץ ביום-אפו מלכים | 5 |
೫ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.
ידין בגוים מלא גויות מחץ ראש על-ארץ רבה | 6 |
೬ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.
מנחל בדרך ישתה על-כן ירים ראש | 7 |
೭ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.