< תהילים 116 >
אהבתי כי-ישמע יהוה-- את-קולי תחנוני | 1 |
೧ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು.
כי-הטה אזנו לי ובימי אקרא | 2 |
೨ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು.
אפפוני חבלי-מות--ומצרי שאול מצאוני צרה ויגון אמצא (Sheol ) | 3 |
೩ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. (Sheol )
ובשם-יהוה אקרא אנה יהוה מלטה נפשי | 4 |
೪ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.
חנון יהוה וצדיק ואלהינו מרחם | 5 |
೫ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.
שמר פתאים יהוה דלתי ולי יהושיע | 6 |
೬ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.
שובי נפשי למנוחיכי כי-יהוה גמל עליכי | 7 |
೭ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.
כי חלצת נפשי ממות את-עיני מן-דמעה את-רגלי מדחי | 8 |
೮ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು,
אתהלך לפני יהוה-- בארצות החיים | 9 |
೯ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.
האמנתי כי אדבר אני עניתי מאד | 10 |
೧೦“ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ,
אני אמרתי בחפזי כל-האדם כזב | 11 |
೧೧“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.
מה-אשיב ליהוה-- כל-תגמולוהי עלי | 12 |
೧೨ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?
כוס-ישועות אשא ובשם יהוה אקרא | 13 |
೧೩ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
נדרי ליהוה אשלם נגדה-נא לכל-עמו | 14 |
೧೪ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.
יקר בעיני יהוה-- המותה לחסידיו | 15 |
೧೫ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.
אנה יהוה כי-אני עבדך אני-עבדך בן-אמתך פתחת למוסרי | 16 |
೧೬ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.
לך-אזבח זבח תודה ובשם יהוה אקרא | 17 |
೧೭ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
נדרי ליהוה אשלם נגדה-נא לכל-עמו | 18 |
೧೮ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,
בחצרות בית יהוה-- בתוככי ירושלם הללו-יה | 19 |
೧೯ಆತನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ!