< תהילים 118 >
הודו ליהוה כי-טוב כי לעולם חסדו | 1 |
೧ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ.
יאמר-נא ישראל כי לעולם חסדו | 2 |
೨ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
יאמרו-נא בית-אהרן כי לעולם חסדו | 3 |
೩ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
יאמרו-נא יראי יהוה כי לעולם חסדו | 4 |
೪ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
מן-המצר קראתי יה ענני במרחב יה | 5 |
೫ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.
יהוה לי לא אירא מה-יעשה לי אדם | 6 |
೬ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?
יהוה לי בעזרי ואני אראה בשנאי | 7 |
೭ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.
טוב לחסות ביהוה-- מבטח באדם | 8 |
೮ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
טוב לחסות ביהוה-- מבטח בנדיבים | 9 |
೯ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
כל-גוים סבבוני בשם יהוה כי אמילם | 10 |
೧೦ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ ಅವರನ್ನು ಸಂಹರಿಸುವೆನು.
סבוני גם-סבבוני בשם יהוה כי אמילם | 11 |
೧೧ಅವರು ನನ್ನನ್ನು ಸುತ್ತಲೂ ಮುತ್ತಿದರು; ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು.
סבוני כדבורים-- דעכו כאש קוצים בשם יהוה כי אמילם | 12 |
೧೨ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.
דחה דחיתני לנפל ויהוה עזרני | 13 |
೧೩ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು.
עזי וזמרת יה ויהי-לי לישועה | 14 |
೧೪ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು.
קול רנה וישועה--באהלי צדיקים ימין יהוה עשה חיל | 15 |
೧೫ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
ימין יהוה רוממה ימין יהוה עשה חיל | 16 |
೧೬ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
לא-אמות כי-אחיה ואספר מעשי יה | 17 |
೧೭ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.
יסר יסרני יה ולמות לא נתנני | 18 |
೧೮ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ.
פתחו-לי שערי-צדק אבא-בם אודה יה | 19 |
೧೯ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.
זה-השער ליהוה צדיקים יבאו בו | 20 |
೨೦ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ.
אודך כי עניתני ותהי-לי לישועה | 21 |
೨೧ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ.
אבן מאסו הבונים-- היתה לראש פנה | 22 |
೨೨ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;
מאת יהוה היתה זאת היא נפלאת בעינינו | 23 |
೨೩ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ.
זה-היום עשה יהוה נגילה ונשמחה בו | 24 |
೨೪ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.
אנא יהוה הושיעה נא אנא יהוה הצליחה נא | 25 |
೨೫ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು.
ברוך הבא בשם יהוה ברכנוכם מבית יהוה | 26 |
೨೬ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.
אל יהוה--ויאר-לנו אסרו-חג בעבתים--עד קרנות המזבח | 27 |
೨೭ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.
אלי אתה ואודך אלהי ארוממך | 28 |
೨೮ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.
הודו ליהוה כי-טוב כי לעולם חסדו | 29 |
೨೯ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.