< תהילים 118 >

הודו ליהוה כי-טוב כי לעולם חסדו 1
ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.
יאמר-נא ישראל כי לעולם חסדו 2
“ದೇವರ ಪ್ರೀತಿಯು ಯುಗಯುಗಕ್ಕೂ ಇದೆ,” ಎಂದು ಇಸ್ರಾಯೇಲ್ ಹೇಳಲಿ.
יאמרו-נא בית-אהרן כי לעולם חסדו 3
“ದೇವರ ಪ್ರೀತಿಯು ಸದಾಕಾಲವೂ ಇರುವುದು,” ಎಂದು ಆರೋನನ ಮನೆಯವರು ಹೇಳಲಿ.
יאמרו-נא יראי יהוה כי לעולם חסדו 4
“ದೇವರ ಪ್ರೀತಿಯು ಸದಾಕಾಲವೂ ಇರುವುದು,” ಎಂದು ಯೆಹೋವ ದೇವರಿಗೆ ಭಯಪಡುವವರು ಹೇಳಲಿ.
מן-המצר קראתי יה ענני במרחב יה 5
ಇಕ್ಕಟ್ಟಿನೊಳಗಿಂದ ಯೆಹೋವ ದೇವರಿಗೆ ಕೂಗಿದೆನು; ಯೆಹೋವ ದೇವರು ಉತ್ತರಕೊಟ್ಟು, ನನ್ನನ್ನು ವಿಶಾಲವಾದ ಸ್ಥಳಕ್ಕೆ ತಂದರು.
יהוה לי לא אירא מה-יעשה לי אדם 6
ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?
יהוה לי בעזרי ואני אראה בשנאי 7
ಯೆಹೋವ ದೇವರು ನನ್ನೊಂದಿಗಿದ್ದಾರೆ, ಅವರು ನನಗೆ ಸಹಾಯಕರು; ನಾನು ವೈರಿಗಳ ಮೇಲೆ ಜಯ ಸಾಧಿಸುವೆನು.
טוב לחסות ביהוה-- מבטח באדם 8
ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು.
טוב לחסות ביהוה-- מבטח בנדיבים 9
ಅಧಿಪತಿಗಳಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರ ಆಶ್ರಯ ಪಡೆಯುವುದು ಒಳ್ಳೆಯದು.
כל-גוים סבבוני בשם יהוה כי אמילם 10
ಎಲ್ಲಾ ರಾಷ್ಟ್ರದವರು ನನ್ನನ್ನು ಸುತ್ತಿಕೊಂಡರು; ಆದರೆ ನಾನು ಯೆಹೋವ ದೇವರ ಹೆಸರಿನಲ್ಲಿ ಅವರನ್ನು ದಂಡಿಸುವೆನು.
סבוני גם-סבבוני בשם יהוה כי אמילם 11
ಅವರು ನನ್ನನ್ನು ಎಲ್ಲಾ ದಿಕ್ಕುಗಳಿಂದ ಸುತ್ತಿಕೊಂಡರು; ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಸೋಲಿಸುವೆನು.
סבוני כדבורים-- דעכו כאש קוצים בשם יהוה כי אמילם 12
ಜೇನುನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ, ಅವರು ಮುಳ್ಳಿನ ಬೆಂಕಿಯ ಹಾಗೆ ಕ್ಷಣಮಾತ್ರದಲ್ಲಿ ಇಲ್ಲವಾಗಿ ಹೋದರು; ಯೆಹೋವ ದೇವರ ಹೆಸರಿನಲ್ಲಿ ನಾನು ಅವರನ್ನು ಸೋಲಿಸುವೆನು.
דחה דחיתני לנפל ויהוה עזרני 13
ನಾನು ಬೀಳುವ ಹಾಗೆ ವೈರಿಯು ನನ್ನನ್ನು ನೂಕಿದನು; ಆದರೆ ಯೆಹೋವ ದೇವರು ನನಗೆ ಸಹಾಯ ಮಾಡಿದರು.
עזי וזמרת יה ויהי-לי לישועה 14
ನನ್ನ ಬಲವೂ, ಬೆಂಬಲವೂ ಯೆಹೋವ ದೇವರೇ; ಅವರೇ ನನಗೆ ರಕ್ಷಣೆಯಾದರು.
קול רנה וישועה--באהלי צדיקים ימין יהוה עשה חיל 15
ಜಯಘೋಷವೂ ಹರ್ಷಧ್ವನಿಯೂ ನೀತಿವಂತರ ಗುಡಾರಗಳಲ್ಲಿ ಪ್ರತಿಧ್ವನಿಸುತ್ತಿರುವುದು; ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ.
ימין יהוה רוממה ימין יהוה עשה חיל 16
ಯೆಹೋವ ದೇವರ ಬಲಗೈ ಎತ್ತರವಾಗಿ ಎತ್ತಲಾಗಿದೆ; ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ.
לא-אמות כי-אחיה ואספר מעשי יה 17
ನಾನು ಸಾಯದೆ ಬದುಕಿರುವೆನು, ಯೆಹೋವ ದೇವರು ಮಾಡಿದ್ದನ್ನು ಸಾರುವೆನು.
יסר יסרני יה ולמות לא נתנני 18
ಏಕೆಂದರೆ ಯೆಹೋವ ದೇವರು ನನ್ನನ್ನು ಕಠಿಣವಾಗಿ ಶಿಕ್ಷಿಸಿದರು; ಆದರೆ ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.
פתחו-לי שערי-צדק אבא-בם אודה יה 19
ನೀತಿಯ ಬಾಗಿಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಯೆಹೋವ ದೇವರಿಗೆ ಧನ್ಯವಾದ ಸಲ್ಲಿಸು.
זה-השער ליהוה צדיקים יבאו בו 20
ಇದೇ ಯೆಹೋವ ದೇವರ ಬಾಗಿಲು; ನೀತಿವಂತರು ಇದರಲ್ಲಿ ಪ್ರವೇಶಿಸುವರು.
אודך כי עניתני ותהי-לי לישועה 21
ನಿಮಗೆ ಕೃತಜ್ಞತಾವಂದನೆ ಸಲ್ಲಿಸುವೆನು; ಏಕೆಂದರೆ ನನಗೆ ನೀವು ಉತ್ತರಕೊಟ್ಟು, ನನಗೆ ರಕ್ಷಣೆಯಾದಿರಿ.
אבן מאסו הבונים-- היתה לראש פנה 22
ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
מאת יהוה היתה זאת היא נפלאת בעינינו 23
ಇದು ಯೆಹೋವ ದೇವರಿಂದಲೇ ಉಂಟಾಯಿತು; ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಯಿತು.
זה-היום עשה יהוה נגילה ונשמחה בו 24
ಯೆಹೋವ ದೇವರು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡೋಣ.
אנא יהוה הושיעה נא אנא יהוה הצליחה נא 25
ಯೆಹೋವ ದೇವರೇ ನಮ್ಮನ್ನು ರಕ್ಷಿಸಿರಿ, ಯೆಹೋವ ದೇವರೇ ನಮಗೆ ಜಯಕೊಡಿರಿ.
ברוך הבא בשם יהוה ברכנוכם מבית יהוה 26
ಯೆಹೋವ ದೇವರ ಹೆಸರಿನಲ್ಲಿ ಬರುವವನು ಧನ್ಯನು; ಯೆಹೋವ ದೇವರ ಆಲಯದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸುವೆವು.
אל יהוה--ויאר-לנו אסרו-חג בעבתים--עד קרנות המזבח 27
ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ.
אלי אתה ואודך אלהי ארוממך 28
ನೀವು ನನ್ನ ದೇವರಾಗಿದ್ದೀರಿ, ನಿಮಗೆ ಉಪಕಾರ ಸಲ್ಲಿಸುವೆನು; ನೀವು ನನ್ನ ದೇವರು; ನಿಮ್ಮನ್ನು ನಾನು ಉನ್ನತಪಡಿಸುವೆನು.
הודו ליהוה כי-טוב כי לעולם חסדו 29
ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ; ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.

< תהילים 118 >