< תהילים 12 >
למנצח על-השמינית מזמור לדוד ב הושיעה יהוה כי-גמר חסיד כי-פסו אמונים מבני אדם | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.
שוא ידברו--איש את-רעהו שפת חלקות--בלב ולב ידברו | 2 |
೨ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.
יכרת יהוה כל-שפתי חלקות-- לשון מדברת גדלות | 3 |
೩ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.
אשר אמרו ללשננו נגביר--שפתינו אתנו מי אדון לנו | 4 |
೪ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.
משד עניים מאנקת אביונים עתה אקום יאמר יהוה אשית בישע יפיח לו | 5 |
೫ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
אמרות יהוה אמרות טהרות כסף צרוף בעליל לארץ מזקק שבעתים | 6 |
೬ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.
אתה-יהוה תשמרם תצרנו מן-הדור זו לעולם | 7 |
೭ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,
סביב רשעים יתהלכון כרם זלות לבני אדם | 8 |
೮ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.