< תהילים 125 >

שיר המעלות הבטחים ביהוה-- כהר-ציון לא-ימוט לעולם ישב 1
ಯಾತ್ರಾಗೀತೆ. ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
ירושלם-- הרים סביב לה ויהוה סביב לעמו-- מעתה ועד-עולם 2
ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.
כי לא ינוח שבט הרשע-- על גורל הצדיקים למען לא-ישלחו הצדיקים בעולתה ידיהם 3
ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.
היטיבה יהוה לטובים ולישרים בלבותם 4
ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು.
והמטים עקלקלותם-- יוליכם יהוה את-פעלי האון שלום על-ישראל 5
ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.

< תהילים 125 >