< תהילים 126 >
שיר המעלות בשוב יהוה את-שיבת ציון-- היינו כחלמים | 1 |
೧ಯಾತ್ರಾಗೀತೆ. ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.
אז ימלא שחוק פינו-- ולשוננו רנה אז יאמרו בגוים-- הגדיל יהוה לעשות עם-אלה | 2 |
೨ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
הגדיל יהוה לעשות עמנו-- היינו שמחים | 3 |
೩ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.
שובה יהוה את-שבותנו (שביתנו)-- כאפיקים בנגב | 4 |
೪ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.
הזרעים בדמעה-- ברנה יקצרו | 5 |
೫ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,
הלוך ילך ובכה-- נשא משך-הזרע בא-יבא ברנה-- נשא אלמתיו | 6 |
೬ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.