< תהילים 127 >
שיר המעלות לשלמה אם-יהוה לא-יבנה בית-- שוא עמלו בוניו בו אם-יהוה לא-ישמר-עיר שוא שקד שומר | 1 |
೧ಯಾತ್ರಾಗೀತೆ; ಸೊಲೊಮೋನನದು. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.
שוא לכם משכימי קום מאחרי-שבת-- אכלי לחם העצבים כן יתן לידידו שנא | 2 |
೨ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
הנה נחלת יהוה בנים שכר פרי הבטן | 3 |
೩ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.
כחצים ביד-גבור-- כן בני הנעורים | 4 |
೪ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
אשרי הגבר-- אשר מלא את-אשפתו מהם לא-יבשו-- כי-ידברו את-אויבים בשער | 5 |
೫ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.