< תהילים 130 >

שיר המעלות ממעמקים קראתיך יהוה 1
ಯಾತ್ರಾಗೀತೆ. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
אדני שמעה בקולי תהיינה אזניך קשבות-- לקול תחנוני 2
ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.
אם-עונות תשמר-יה-- אדני מי יעמד 3
ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?
כי-עמך הסליחה-- למען תורא 4
ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.
קויתי יהוה קותה נפשי ולדברו הוחלתי 5
ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.
נפשי לאדני-- משמרים לבקר שמרים לבקר 6
ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.
יחל ישראל אל-יהוה כי-עם-יהוה החסד והרבה עמו פדות 7
ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.
והוא יפדה את-ישראל-- מכל עונתיו 8
ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.

< תהילים 130 >