< תהילים 131 >

שיר המעלות לדוד יהוה לא-גבה לבי-- ולא-רמו עיני ולא-הלכתי בגדלות ובנפלאות ממני 1
ಯಾತ್ರಾಗೀತೆ; ದಾವೀದನದು. ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.
אם-לא שויתי ודוממתי-- נפשי כגמל עלי אמו כגמל עלי נפשי 2
ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.
יחל ישראל אל-יהוה-- מעתה ועד-עולם 3
ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.

< תהילים 131 >