< תהילים 137 >

על נהרות בבל--שם ישבנו גם-בכינו בזכרנו את-ציון 1
ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.
על-ערבים בתוכה-- תלינו כנרותינו 2
ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.
כי שם שאלונו שובינו דברי-שיר-- ותוללינו שמחה שירו לנו משיר ציון 3
ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು.
איך--נשיר את-שיר-יהוה על אדמת נכר 4
ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ?
אם-אשכחך ירושלם-- תשכח ימיני 5
ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.
תדבק-לשוני לחכי-- אם-לא אזכרכי אם-לא אעלה את-ירושלם-- על ראש שמחתי 6
ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.
זכר יהוה לבני אדום-- את יום ירושלם האמרים ערו ערו-- עד היסוד בה 7
ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.
בת-בבל השדודה אשרי שישלם-לך-- את-גמולך שגמלת לנו 8
ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.
אשרי שיאחז ונפץ את-עלליך-- אל-הסלע 9
ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.

< תהילים 137 >