< תהילים 138 >

לדוד אודך בכל-לבי נגד אלהים אזמרך 1
ದಾವೀದನ ಕೀರ್ತನೆ. ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.
אשתחוה אל-היכל קדשך ואודה את-שמך-- על-חסדך ועל-אמתך כי-הגדלת על-כל-שמך אמרתך 2
ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.
ביום קראתי ותענני תרהבני בנפשי עז 3
ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.
יודוך יהוה כל-מלכי-ארץ כי שמעו אמרי-פיך 4
ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು.
וישירו בדרכי יהוה כי-גדול כבוד יהוה 5
ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.
כי-רם יהוה ושפל יראה וגבה ממרחק יידע 6
ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.
אם-אלך בקרב צרה-- תחיני על אף איבי תשלח ידך ותושיעני ימינך 7
ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.
יהוה יגמר בעדי יהוה חסדך לעולם מעשי ידיך אל-תרף 8
ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.

< תהילים 138 >