< תהילים 145 >
תהלה לדוד ארוממך אלוהי המלך ואברכה שמך לעולם ועד | 1 |
೧ದಾವೀದನ ಕೀರ್ತನೆ. ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.
בכל-יום אברכך ואהללה שמך לעולם ועד | 2 |
೨ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.
גדול יהוה ומהלל מאד ולגדלתו אין חקר | 3 |
೩ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.
דור לדור ישבח מעשיך וגבורתיך יגידו | 4 |
೪ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.
הדר כבוד הודך-- ודברי נפלאתיך אשיחה | 5 |
೫ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.
ועזוז נוראתיך יאמרו וגדלותיך (וגדלתך) אספרנה | 6 |
೬ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.
זכר רב-טובך יביעו וצדקתך ירננו | 7 |
೭ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.
חנון ורחום יהוה ארך אפים וגדל-חסד | 8 |
೮ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.
טוב-יהוה לכל ורחמיו על-כל-מעשיו | 9 |
೯ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.
יודוך יהוה כל-מעשיך וחסידיך יברכוכה | 10 |
೧೦ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
כבוד מלכותך יאמרו וגבורתך ידברו | 11 |
೧೧ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.
להודיע לבני האדם--גבורתיו וכבוד הדר מלכותו | 12 |
೧೨ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
מלכותך מלכות כל-עלמים וממשלתך בכל-דור ודר | 13 |
೧೩ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
סומך יהוה לכל-הנפלים וזוקף לכל-הכפופים | 14 |
೧೪ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.
עיני-כל אליך ישברו ואתה נותן-להם את-אכלם בעתו | 15 |
೧೫ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.
פותח את-ידך ומשביע לכל-חי רצון | 16 |
೧೬ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.
צדיק יהוה בכל-דרכיו וחסיד בכל-מעשיו | 17 |
೧೭ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.
קרוב יהוה לכל-קראיו-- לכל אשר יקראהו באמת | 18 |
೧೮ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
רצון-יראיו יעשה ואת-שועתם ישמע ויושיעם | 19 |
೧೯ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.
שומר יהוה את-כל-אהביו ואת כל-הרשעים ישמיד | 20 |
೨೦ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.
תהלת יהוה ידבר-פי ויברך כל-בשר שם קדשו--לעולם ועד | 21 |
೨೧ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.