< תהילים 146 >

הללו-יה הללי נפשי את-יהוה 1
ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು.
אהללה יהוה בחיי אזמרה לאלהי בעודי 2
ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.
אל-תבטחו בנדיבים-- בבן-אדם שאין לו תשועה 3
ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,
תצא רוחו ישב לאדמתו ביום ההוא אבדו עשתנתיו 4
ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.
אשרי--שאל יעקב בעזרו שברו על-יהוה אלהיו 5
ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
עשה שמים וארץ-- את-הים ואת-כל-אשר-בם השמר אמת לעולם 6
ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,
עשה משפט לעשוקים--נתן לחם לרעבים יהוה מתיר אסורים 7
ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.
יהוה פקח עורים--יהוה זקף כפופים יהוה אהב צדיקים 8
ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.
יהוה שמר את-גרים--יתום ואלמנה יעודד ודרך רשעים יעות 9
ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.
ימלך יהוה לעולם-- אלהיך ציון לדר ודר הללו-יה 10
೧೦ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!

< תהילים 146 >