< תהילים 147 >
הללו-יה כי-טוב זמרה אלהינו-- כי-נעים נאוה תהלה | 1 |
೧ಯೆಹೋವನಿಗೆ ಸ್ತೋತ್ರ! ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ, ಆತನನ್ನು ಕೀರ್ತಿಸುವುದು ಯುಕ್ತವಾಗಿದೆ.
בונה ירושלם יהוה נדחי ישראל יכנס | 2 |
೨ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,
הרפא לשבורי לב ומחבש לעצבותם | 3 |
೩ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.
מונה מספר לכוכבים לכלם שמות יקרא | 4 |
೪ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.
גדול אדונינו ורב-כח לתבונתו אין מספר | 5 |
೫ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.
מעודד ענוים יהוה משפיל רשעים עדי-ארץ | 6 |
೬ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.
ענו ליהוה בתודה זמרו לאלהינו בכנור | 7 |
೭ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.
המכסה שמים בעבים-- המכין לארץ מטר המצמיח הרים חציר | 8 |
೮ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
נותן לבהמה לחמה לבני ערב אשר יקראו | 9 |
೯ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.
לא בגבורת הסוס יחפץ לא-בשוקי האיש ירצה | 10 |
೧೦ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.
רוצה יהוה את-יראיו-- את-המיחלים לחסדו | 11 |
೧೧ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.
שבחי ירושלם את-יהוה הללי אלהיך ציון | 12 |
೧೨ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
כי-חזק בריחי שעריך ברך בניך בקרבך | 13 |
೧೩ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.
השם-גבולך שלום חלב חטים ישביעך | 14 |
೧೪ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.
השלח אמרתו ארץ עד-מהרה ירוץ דברו | 15 |
೧೫ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ.
הנתן שלג כצמר כפור כאפר יפזר | 16 |
೧೬ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.
משליך קרחו כפתים לפני קרתו מי יעמד | 17 |
೧೭ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ, ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?
ישלח דברו וימסם ישב רוחו יזלו-מים | 18 |
೧೮ಆತನು ಅಪ್ಪಣೆಕೊಡಲು ಅವು ಕರಗುತ್ತವೆ, ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.
מגיד דברו ליעקב חקיו ומשפטיו לישראל | 19 |
೧೯ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.
לא עשה כן לכל-גוי-- ומשפטים בל-ידעום הללו-יה | 20 |
೨೦ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!