< תהילים 148 >
הללו-יה הללו את-יהוה מן-השמים הללוהו במרומים | 1 |
೧ಯೆಹೋವನಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ, ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.
הללוהו כל-מלאכיו הללוהו כל-צבאו | 2 |
೨ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.
הללוהו שמש וירח הללוהו כל-כוכבי אור | 3 |
೩ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.
הללוהו שמי השמים והמים אשר מעל השמים | 4 |
೪ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ.
יהללו את-שם יהוה כי הוא צוה ונבראו | 5 |
೫ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು.
ויעמידם לעד לעולם חק-נתן ולא יעבור | 6 |
೬ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.
הללו את-יהוה מן-הארץ-- תנינים וכל-תהמות | 7 |
೭ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ. ತಿಮಿಂಗಿಲಗಳು, ಆದಿಸಾಗರಗಳು
אש וברד שלג וקיטור רוח סערה עשה דברו | 8 |
೮ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,
ההרים וכל-גבעות עץ פרי וכל-ארזים | 9 |
೯ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, ಎಲ್ಲಾ ತುರಾಯಿ ಮರಗಳು,
החיה וכל-בהמה רמש וצפור כנף | 10 |
೧೦ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು,
מלכי-ארץ וכל-לאמים שרים וכל-שפטי ארץ | 11 |
೧೧ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು,
בחורים וגם-בתולות זקנים עם-נערים | 12 |
೧೨ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು
יהללו את-שם יהוה-- כי-נשגב שמו לבדו הודו על-ארץ ושמים | 13 |
೧೩ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.
וירם קרן לעמו תהלה לכל-חסידיו-- לבני ישראל עם קרבו הללו-יה | 14 |
೧೪ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!