< תהילים 149 >
הללו-יה שירו ליהוה שיר חדש תהלתו בקהל חסידים | 1 |
೧ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.
ישמח ישראל בעשיו בני-ציון יגילו במלכם | 2 |
೨ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.
יהללו שמו במחול בתף וכנור יזמרו-לו | 3 |
೩ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.
כי-רוצה יהוה בעמו יפאר ענוים בישועה | 4 |
೪ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.
יעלזו חסידים בכבוד ירננו על-משכבותם | 5 |
೫ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.
רוממות אל בגרונם וחרב פיפיות בידם | 6 |
೬ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.
לעשות נקמה בגוים תוכחות בלאמים | 7 |
೭ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;
לאסר מלכיהם בזקים ונכבדיהם בכבלי ברזל | 8 |
೮ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.
לעשות בהם משפט כתוב-- הדר הוא לכל-חסידיו הללו-יה | 9 |
೯ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.