< תהילים 16 >
מכתם לדוד שמרני אל כי-חסיתי בך | 1 |
೧ದಾವೀದನ ಕಾವ್ಯ. ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.
אמרת ליהוה אדני אתה טובתי בל-עליך | 2 |
೨ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.
לקדושים אשר-בארץ המה ואדירי כל-חפצי-בם | 3 |
೩ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.
ירבו עצבותם אחר מהרו בל-אסיך נסכיהם מדם ובל-אשא את-שמותם על-שפתי | 4 |
೪ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.
יהוה מנת-חלקי וכוסי-- אתה תומיך גורלי | 5 |
೫ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.
חבלים נפלו-לי בנעמים אף-נחלת שפרה עלי | 6 |
೬ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ.
אברך--את-יהוה אשר יעצני אף-לילות יסרוני כליותי | 7 |
೭ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.
שויתי יהוה לנגדי תמיד כי מימיני בל-אמוט | 8 |
೮ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
לכן שמח לבי--ויגל כבודי אף-בשרי ישכן לבטח | 9 |
೯ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು.
כי לא-תעזב נפשי לשאול לא-תתן חסידך לראות שחת (Sheol ) | 10 |
೧೦ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. (Sheol )
תודיעני ארח חיים שבע שמחות את-פניך נעמות בימינך נצח | 11 |
೧೧ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.