< תהילים 17 >
תפלה לדוד שמעה יהוה צדק-- הקשיבה רנתי האזינה תפלתי בלא שפתי מרמה | 1 |
೧ದಾವೀದನ ಪ್ರಾರ್ಥನೆ. ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.
מלפניך משפטי יצא עיניך תחזינה מישרים | 2 |
೨ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.
בחנת לבי פקדת לילה-- צרפתני בל-תמצא זמתי בל-יעבר-פי | 3 |
೩ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.
לפעלות אדם בדבר שפתיך-- אני שמרתי ארחות פריץ | 4 |
೪ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.
תמך אשרי במעגלותיך בל-נמוטו פעמי | 5 |
೫ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.
אני-קראתיך כי-תענני אל הט-אזנך לי שמע אמרתי | 6 |
೬ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.
הפלה חסדיך מושיע חוסים-- ממתקוממים בימינך | 7 |
೭ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.
שמרני כאישון בת-עין בצל כנפיך תסתירני | 8 |
೮ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.
מפני רשעים זו שדוני איבי בנפש יקיפו עלי | 9 |
೯ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.
חלבמו סגרו פימו דברו בגאות | 10 |
೧೦ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ.
אשרינו עתה סבבוני (סבבונו) עיניהם ישיתו לנטות בארץ | 11 |
೧೧ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.
דמינו--כאריה יכסוף לטרף וככפיר ישב במסתרים | 12 |
೧೨ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.
קומה יהוה-- קדמה פניו הכריעהו פלטה נפשי מרשע חרבך | 13 |
೧೩ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.
ממתים ידך יהוה ממתים מחלד-- חלקם בחיים וצפינך (וצפונך) תמלא בטנם ישבעו בנים-- והניחו יתרם לעולליהם | 14 |
೧೪ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.
אני--בצדק אחזה פניך אשבעה בהקיץ תמונתך | 15 |
೧೫ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.