< תהילים 18 >
למנצח לעבד יהוה--לדוד אשר דבר ליהוה את-דברי השירה הזאת-- ביום הציל-יהוה אותו מכף כל-איביו ומיד שאול ב ויאמר-- ארחמך יהוה חזקי | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಯೆಹೋವನ ಸೇವಕನಾದ ದಾವೀದನು ಸೌಲನಿಂದಲೂ, ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸಲ್ಪಟ್ಟಾಗ ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು. ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.
יהוה סלעי ומצודתי-- ומפלטי אלי צורי אחסה-בו מגני וקרן-ישעי משגבי | 2 |
೨ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
מהלל אקרא יהוה ומן-איבי אושע | 3 |
೩ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
אפפוני חבלי-מות ונחלי בליעל יבעתוני | 4 |
೪ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.
חבלי שאול סבבוני קדמוני מוקשי מות (Sheol ) | 5 |
೫ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು. (Sheol )
בצר-לי אקרא יהוה-- ואל-אלהי אשוע ישמע מהיכלו קולי ושועתי לפניו תבוא באזניו | 6 |
೬ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.
ותגעש ותרעש הארץ-- ומוסדי הרים ירגזו ויתגעשו כי-חרה לו | 7 |
೭ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.
עלה עשן באפו-- ואש-מפיו תאכל גחלים בערו ממנו | 8 |
೮ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
ויט שמים וירד וערפל תחת רגליו | 9 |
೯ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
וירכב על-כרוב ויעף וידא על-כנפי-רוח | 10 |
೧೦ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.
ישת חשך סתרו-- סביבותיו סכתו חשכת-מים עבי שחקים | 11 |
೧೧ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.
מנגה נגדו עביו עברו--ברד וגחלי-אש | 12 |
೧೨ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.
וירעם בשמים יהוה--ועליון יתן קלו ברד וגחלי-אש | 13 |
೧೩ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.
וישלח חציו ויפיצם וברקים רב ויהמם | 14 |
೧೪ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು.
ויראו אפיקי מים ויגלו מוסדות תבל מגערתך יהוה-- מנשמת רוח אפך | 15 |
೧೫ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.
ישלח ממרום יקחני ימשני ממים רבים | 16 |
೧೬ಆತನು ಮೇಲಣ ಲೋಕದಿಂದ ಕೈಚಾಚಿ, ನನ್ನನ್ನು ಹಿಡಿದು, ಮಹಾಜಲರಾಶಿಗಳೊಳಗಿಂದ ಎಳೆದನು.
יצילני מאיבי עז ומשנאי כי-אמצו ממני | 17 |
೧೭ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.
יקדמוני ביום-אידי ויהי-יהוה למשען לי | 18 |
೧೮ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು, ಆಗ ಯೆಹೋವನು ನನಗೆ ಉದ್ಧಾರಕನಾದನು.
ויוציאני למרחב יחלצני כי חפץ בי | 19 |
೧೯ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.
יגמלני יהוה כצדקי כבר ידי ישיב לי | 20 |
೨೦ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.
כי-שמרתי דרכי יהוה ולא-רשעתי מאלהי | 21 |
೨೧ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.
כי כל-משפטיו לנגדי וחקתיו לא-אסיר מני | 22 |
೨೨ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.
ואהי תמים עמו ואשתמר מעוני | 23 |
೨೩ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
וישב-יהוה לי כצדקי כבר ידי לנגד עיניו | 24 |
೨೪ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ, ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.
עם-חסיד תתחסד עם-גבר תמים תתמם | 25 |
೨೫ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವನಿಗೆ ನಿರ್ದೋಷಿಯೂ,
עם-נבר תתברר ועם-עקש תתפתל | 26 |
೨೬ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.
כי-אתה עם-עני תושיע ועינים רמות תשפיל | 27 |
೨೭ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
כי-אתה תאיר נרי יהוה אלהי יגיה חשכי | 28 |
೨೮ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.
כי-בך ארץ גדוד ובאלהי אדלג-שור | 29 |
೨೯ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು.
האל תמים דרכו אמרת-יהוה צרופה מגן הוא לכל החסים בו | 30 |
೩೦ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
כי מי אלוה מבלעדי יהוה ומי צור זולתי אלהינו | 31 |
೩೧ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
האל המאזרני חיל ויתן תמים דרכי | 32 |
೩೨ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.
משוה רגלי כאילות ועל במתי יעמידני | 33 |
೩೩ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.
מלמד ידי למלחמה ונחתה קשת-נחושה זרועתי | 34 |
೩೪ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
ותתן-לי מגן ישעך וימינך תסעדני וענותך תרבני | 35 |
೩೫ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
תרחיב צעדי תחתי ולא מעדו קרסלי | 36 |
೩೬ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ.
ארדוף אויבי ואשיגם ולא-אשוב עד-כלותם | 37 |
೩೭ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
אמחצם ולא-יכלו קום יפלו תחת רגלי | 38 |
೩೮ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.
ותאזרני חיל למלחמה תכריע קמי תחתי | 39 |
೩೯ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ.
ואיבי נתתה לי ערף ומשנאי אצמיתם | 40 |
೪೦ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ; ನನ್ನ ಹಗೆಯವರನ್ನು ನಾನು ನಿರ್ಮೂಲಮಾಡುವೆನು.
ישועו ואין-מושיע על-יהוה ולא ענם | 41 |
೪೧ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
ואשחקם כעפר על-פני-רוח כטיט חוצות אריקם | 42 |
೪೨ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.
תפלטני מריבי-עם תשימני לראש גוים עם לא-ידעתי יעבדוני | 43 |
೪೩ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
לשמע אזן ישמעו לי בני-נכר יכחשו-לי | 44 |
೪೪ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು.
בני-נכר יבלו ויחרגו ממסגרותיהם | 45 |
೪೫ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
חי-יהוה וברוך צורי וירום אלוהי ישעי | 46 |
೪೬ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.
האל--הנותן נקמות לי וידבר עמים תחתי | 47 |
೪೭ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
מפלטי מאיבי אף מן-קמי תרוממני מאיש חמס תצילני | 48 |
೪೮ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.
על-כן אודך בגוים יהוה ולשמך אזמרה | 49 |
೪೯ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.
מגדל ישועות מלכו ועשה חסד למשיחו--לדוד ולזרעו עד-עולם | 50 |
೫೦ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.