< תהילים 20 >
למנצח מזמור לדוד ב יענך יהוה ביום צרה ישגבך שם אלהי יעקב | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.
ישלח-עזרך מקדש ומציון יסעדך | 2 |
೨ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.
יזכר כל-מנחתך ועולתך ידשנה סלה | 3 |
೩ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. (ಸೆಲಾ)
יתן-לך כלבבך וכל-עצתך ימלא | 4 |
೪ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.
נרננה בישועתך-- ובשם-אלהינו נדגל ימלא יהוה כל-משאלותיך | 5 |
೫ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.
עתה ידעתי-- כי הושיע יהוה משיחו יענהו משמי קדשו-- בגברות ישע ימינו | 6 |
೬ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.
אלה ברכב ואלה בסוסים ואנחנו בשם-יהוה אלהינו נזכיר | 7 |
೭ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
המה כרעו ונפלו ואנחנו קמנו ונתעודד | 8 |
೮ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.
יהוה הושיעה המלך יעננו ביום-קראנו | 9 |
೯ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.