< תהילים 21 >
למנצח מזמור לדוד ב יהוה בעזך ישמח-מלך ובישועתך מה-יגיל (יגל) מאד | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.
תאות לבו נתתה לו וארשת שפתיו בל-מנעת סלה | 2 |
೨ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. (ಸೆಲಾ)
כי-תקדמנו ברכות טוב תשית לראשו עטרת פז | 3 |
೩ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.
חיים שאל ממך--נתתה לו ארך ימים עולם ועד | 4 |
೪ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.
גדול כבודו בישועתך הוד והדר תשוה עליו | 5 |
೫ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.
כי-תשיתהו ברכות לעד תחדהו בשמחה את-פניך | 6 |
೬ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.
כי-המלך בטח ביהוה ובחסד עליון בל-ימוט | 7 |
೭ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.
תמצא ידך לכל-איביך ימינך תמצא שנאיך | 8 |
೮ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.
תשיתמו כתנור אש-- לעת פניך יהוה באפו יבלעם ותאכלם אש | 9 |
೯ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
פרימו מארץ תאבד וזרעם מבני אדם | 10 |
೧೦ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.
כי-נטו עליך רעה חשבו מזמה בל-יוכלו | 11 |
೧೧ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.
כי תשיתמו שכם במיתריך תכונן על-פניהם | 12 |
೧೨ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ.
רומה יהוה בעזך נשירה ונזמרה גבורתך | 13 |
೧೩ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.