< תהילים 25 >
לדוד אליך יהוה נפשי אשא | 1 |
ದಾವೀದನ ಕೀರ್ತನೆ. ಯೆಹೋವ ದೇವರೇ, ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ.
אלהי--בך בטחתי אל-אבושה אל-יעלצו אויבי לי | 2 |
ನನ್ನ ದೇವರೇ, ನಾನು ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ; ನಾನು ನಾಚಿಕೆಪಡದಂತೆ ಮಾಡಿರಿ; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
גם כל-קויך לא יבשו יבשו הבוגדים ריקם | 3 |
ನಿಮ್ಮನ್ನು ನಿರೀಕ್ಷಿಸುವವರಲ್ಲಿ ಯಾರೂ ನಾಚಿಕೆಪಡದಿರಲಿ; ನಿಷ್ಕಾರಣವಾಗಿ ವಂಚನೆ ಮಾಡುವವರು ನಾಚಿಕೆಪಡಲಿ.
דרכיך יהוה הודיעני ארחותיך למדני | 4 |
ಯೆಹೋವ ದೇವರೇ, ನಿಮ್ಮ ಮಾರ್ಗಗಳನ್ನು ನನಗೆ ತೋರಿಸಿರಿ; ನಿಮ್ಮ ದಾರಿಗಳನ್ನು ನನಗೆ ಕಲಿಸಿರಿ.
הדריכני באמתך ולמדני-- כי-אתה אלהי ישעי אותך קויתי כל-היום | 5 |
ನಿಮ್ಮ ಸತ್ಯದಲ್ಲಿ ಮಾರ್ಗದರ್ಶನ ನೀಡಿ ನನಗೆ ಬೋಧಿಸಿರಿ; ಏಕೆಂದರೆ ನೀವು ನನ್ನ ರಕ್ಷಕ ಆಗಿರುವ ದೇವರಾಗಿದ್ದೀರಿ; ನಿಮ್ಮನ್ನು ನಾನು ದಿನವೆಲ್ಲಾ ನಿರೀಕ್ಷಿಸುತ್ತಿದ್ದೇನೆ.
זכר-רחמיך יהוה וחסדיך כי מעולם המה | 6 |
ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ, ಕರುಣೆಯನ್ನೂ ಜ್ಞಾಪಕಮಾಡಿಕೊಳ್ಳಿರಿ.
חטאות נעורי ופשעי-- אל-תזכר כחסדך זכר-לי-אתה-- למען טובך יהוה | 7 |
ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.
טוב-וישר יהוה על-כן יורה חטאים בדרך | 8 |
ಯೆಹೋವ ದೇವರು ಒಳ್ಳೆಯವರೂ ನ್ಯಾಯವುಳ್ಳವರೂ ಆಗಿದ್ದಾರೆ; ಆದ್ದರಿಂದ ಅವರು ಪಾಪಿಗಳಿಗೆ ತಮ್ಮ ಮಾರ್ಗಗಳನ್ನು ಬೋಧಿಸುತ್ತಾರೆ.
ידרך ענוים במשפט וילמד ענוים דרכו | 9 |
ದೀನರನ್ನು ನ್ಯಾಯ ಮಾರ್ಗದಲ್ಲಿ ನಡೆಸಿ, ದೀನರಿಗೆ ತಮ್ಮ ಮಾರ್ಗವನ್ನು ಬೋಧಿಸುತ್ತಾರೆ.
כל-ארחות יהוה חסד ואמת-- לנצרי בריתו ועדתיו | 10 |
ಯೆಹೋವ ದೇವರ ಒಡಂಬಡಿಕೆಯನ್ನು ಕೈಗೊಳ್ಳುವವರಿಗೆ ಅವರ ದಾರಿಯೆಲ್ಲವು ಪ್ರೀತಿ, ಸತ್ಯದಿಂದ ತುಂಬಿರುತ್ತವೆ.
למען-שמך יהוה וסלחת לעוני כי רב-הוא | 11 |
ನನ್ನ ಅನ್ಯಾಯವು ಬಹು ಘೋರವಾಗಿದ್ದರೂ ನಿಮ್ಮ ಹೆಸರಿನ ನಿಮಿತ್ತ ಯೆಹೋವ ದೇವರೇ ನನ್ನನ್ನು ಮನ್ನಿಸಿರಿ.
מי-זה האיש ירא יהוה-- יורנו בדרך יבחר | 12 |
ಯಾವನು ಯೆಹೋವ ದೇವರಿಗೆ ಭಯಪಡುವನೋ, ಅಂಥವನಿಗೆ ಅವರು ಆಯ್ದುಕೊಳ್ಳತಕ್ಕ ಮಾರ್ಗವನ್ನು ಬೋಧಿಸುವರು.
נפשו בטוב תלין וזרעו יירש ארץ | 13 |
ಅಂಥವರು ಜೀವಮಾನವೆಲ್ಲಾ ಸಫಲರಾಗಿರುವರು. ಅಂಥವರ ಸಂತಾನವು ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದು.
סוד יהוה ליראיו ובריתו להודיעם | 14 |
ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.
עיני תמיד אל-יהוה כי הוא-יוציא מרשת רגלי | 15 |
ನನ್ನ ಕಣ್ಣುಗಳು ಯಾವಾಗಲೂ ಯೆಹೋವ ದೇವರ ಕಡೆಗೆ ಇರುತ್ತವೆ; ಏಕೆಂದರೆ ಅವರೇ ನನ್ನ ಪಾದಗಳನ್ನು ಬಲೆಯಿಂದ ಬಿಡಿಸುವವರು.
פנה-אלי וחנני כי-יחיד ועני אני | 16 |
ನೀವು ನನ್ನ ಕಡೆಗೆ ತಿರುಗಿ ನನ್ನನ್ನು ಕರುಣಿಸಿರಿ; ನಾನು ಒಬ್ಬಂಟಿಗನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
צרות לבבי הרחיבו ממצוקותי הוציאני | 17 |
ನನ್ನ ಹೃದಯದ ಕಷ್ಟಗಳನ್ನು ಪರಿಹರಿಸಿರಿ; ನೀವು ನನ್ನ ಸಂಕಟಗಳಿಂದ ನನ್ನನ್ನು ಬಿಡಿಸಿರಿ.
ראה עניי ועמלי ושא לכל-חטאותי | 18 |
ನನ್ನ ಬಾಧೆಯನ್ನೂ ವ್ಯಥೆಯನ್ನೂ ನೋಡಿರಿ; ನನ್ನ ಪಾಪಗಳನ್ನೆಲ್ಲಾ ತೆಗೆದುಹಾಕಿರಿ.
ראה-איבי כי-רבו ושנאת חמס שנאוני | 19 |
ನನ್ನ ಶತ್ರುಗಳನ್ನು ನೋಡಿರಿ, ಅವರು ಹೆಚ್ಚಾಗಿದ್ದಾರೆ; ತೀವ್ರ ಹಗೆಯಿಂದ ಅವರು ನನ್ನನ್ನು ದ್ವೇಷಿಸುತ್ತಾರೆ.
שמרה נפשי והצילני אל-אבוש כי-חסיתי בך | 20 |
ನನ್ನ ಪ್ರಾಣವನ್ನು ಕಾಪಾಡಿ, ನನ್ನನ್ನು ಬಿಡಿಸಿರಿ; ನಾನು ನಾಚಿಕೆಪಡದಂತೆ ಮಾಡಿರಿ, ಏಕೆಂದರೆ ನಾನು ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ.
תם-וישר יצרוני כי קויתיך | 21 |
ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.
פדה אלהים את-ישראל-- מכל צרותיו | 22 |
ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ವಿಮೋಚಿಸಿರಿ.