< תהילים 27 >
לדוד יהוה אורי וישעי--ממי אירא יהוה מעוז-חיי ממי אפחד | 1 |
೧ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?
בקרב עלי מרעים-- לאכל את-בשרי צרי ואיבי לי המה כשלו ונפלו | 2 |
೨ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು.
אם-תחנה עלי מחנה-- לא-יירא לבי אם-תקום עלי מלחמה-- בזאת אני בוטח | 3 |
೩ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು.
אחת שאלתי מאת-יהוה-- אותה אבקש שבתי בבית-יהוה כל-ימי חיי לחזות בנעם-יהוה ולבקר בהיכלו | 4 |
೪ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
כי יצפנני בסכה-- ביום רעה יסתרני בסתר אהלו בצור ירוממני | 5 |
೫ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
ועתה ירום ראשי על איבי סביבותי ואזבחה באהלו זבחי תרועה אשירה ואזמרה ליהוה | 6 |
೬ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.
שמע-יהוה קולי אקרא וחנני וענני | 7 |
೭ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು.
לך אמר לבי--בקשו פני את-פניך יהוה אבקש | 8 |
೮“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.
אל-תסתר פניך ממני-- אל תט-באף עבדך עזרתי היית אל-תטשני ואל-תעזבני אלהי ישעי | 9 |
೯ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.
כי-אבי ואמי עזבוני ויהוה יאספני | 10 |
೧೦ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
הורני יהוה דרכך ונחני בארח מישור--למען שוררי | 11 |
೧೧ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.
אל-תתנני בנפש צרי כי קמו-בי עדי-שקר ויפח חמס | 12 |
೧೨ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.
לולא--האמנתי לראות בטוב-יהוה בארץ חיים | 13 |
೧೩ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.
קוה אל-יהוה חזק ויאמץ לבך וקוה אל-יהוה | 14 |
೧೪ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.