< תהילים 33 >
רננו צדיקים ביהוה לישרים נאוה תהלה | 1 |
೧ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.
הודו ליהוה בכנור בנבל עשור זמרו-לו | 2 |
೨ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.
שירו-לו שיר חדש היטיבו נגן בתרועה | 3 |
೩ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.
כי-ישר דבר-יהוה וכל-מעשהו באמונה | 4 |
೪ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ.
אהב צדקה ומשפט חסד יהוה מלאה הארץ | 5 |
೫ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.
בדבר יהוה שמים נעשו וברוח פיו כל-צבאם | 6 |
೬ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.
כנס כנד מי הים נתן באוצרות תהומות | 7 |
೭ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.
ייראו מיהוה כל-הארץ ממנו יגורו כל-ישבי תבל | 8 |
೮ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.
כי הוא אמר ויהי הוא-צוה ויעמד | 9 |
೯ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
יהוה הפיר עצת-גוים הניא מחשבות עמים | 10 |
೧೦ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
עצת יהוה לעולם תעמד מחשבות לבו לדר ודר | 11 |
೧೧ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
אשרי הגוי אשר-יהוה אלהיו העם בחר לנחלה לו | 12 |
೧೨ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.
משמים הביט יהוה ראה את-כל-בני האדם | 13 |
೧೩ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;
ממכון-שבתו השגיח-- אל כל-ישבי הארץ | 14 |
೧೪ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.
היצר יחד לבם המבין אל-כל-מעשיהם | 15 |
೧೫ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.
אין-המלך נושע ברב-חיל גבור לא-ינצל ברב-כח | 16 |
೧೬ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.
שקר הסוס לתשועה וברב חילו לא ימלט | 17 |
೧೭ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.
הנה עין יהוה אל-יראיו למיחלים לחסדו | 18 |
೧೮ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
להציל ממות נפשם ולחיותם ברעב | 19 |
೧೯ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.
נפשנו חכתה ליהוה עזרנו ומגננו הוא | 20 |
೨೦ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ.
כי-בו ישמח לבנו כי בשם קדשו בטחנו | 21 |
೨೧ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.
יהי-חסדך יהוה עלינו כאשר יחלנו לך | 22 |
೨೨ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.