< תהילים 38 >
מזמור לדוד להזכיר ב יהוה--אל-בקצפך תוכיחני ובחמתך תיסרני | 1 |
೧ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು. ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.
כי-חציך נחתו בי ותנחת עלי ידך | 2 |
೨ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ.
אין-מתם בבשרי מפני זעמך אין-שלום בעצמי מפני חטאתי | 3 |
೩ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.
כי עונתי עברו ראשי כמשא כבד יכבדו ממני | 4 |
೪ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.
הבאישו נמקו חבורתי מפני אולתי | 5 |
೫ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ.
נעויתי שחתי עד-מאד כל-היום קדר הלכתי | 6 |
೬ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ.
כי-כסלי מלאו נקלה ואין מתם בבשרי | 7 |
೭ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.
נפוגותי ונדכיתי עד-מאד שאגתי מנהמת לבי | 8 |
೮ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.
אדני נגדך כל-תאותי ואנחתי ממך לא-נסתרה | 9 |
೯ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.
לבי סחרחר עזבני כחי ואור-עיני גם-הם אין אתי | 10 |
೧೦ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.
אהבי ורעי--מנגד נגעי יעמדו וקרובי מרחק עמדו | 11 |
೧೧ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.
וינקשו מבקשי נפשי ודרשי רעתי דברו הוות ומרמות כל-היום יהגו | 12 |
೧೨ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.
ואני כחרש לא אשמע וכאלם לא יפתח-פיו | 13 |
೧೩ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿ ತೆರೆಯುವುದೇ ಇಲ್ಲ.
ואהי--כאיש אשר לא-שמע ואין בפיו תוכחות | 14 |
೧೪ನಾನು ಕಿವಿ ಕೇಳಿಸದವನಂತೆಯೂ, ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು.
כי-לך יהוה הוחלתי אתה תענה אדני אלהי | 15 |
೧೫ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.
כי-אמרתי פן-ישמחו-לי במוט רגלי עלי הגדילו | 16 |
೧೬“ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು.
כי-אני לצלע נכון ומכאובי נגדי תמיד | 17 |
೧೭ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ.
כי-עוני אגיד אדאג מחטאתי | 18 |
೧೮ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.
ואיבי חיים עצמו ורבו שנאי שקר | 19 |
೧೯ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ.
ומשלמי רעה תחת טובה-- ישטנוני תחת רדופי- (רדפי-) טוב | 20 |
೨೦ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.
אל-תעזבני יהוה אלהי אל-תרחק ממני | 21 |
೨೧ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ.
חושה לעזרתי אדני תשועתי | 22 |
೨೨ನನ್ನ ಕರ್ತನೇ, ನನ್ನ ರಕ್ಷಕನೇ, ಬೇಗ ಬಂದು ಸಹಾಯಮಾಡು.