< תהילים 38 >

מזמור לדוד להזכיר ב יהוה--אל-בקצפך תוכיחני ובחמתך תיסרני 1
ದಾವೀದನ ಕೀರ್ತನೆ. ದುರವಸ್ಥೆಯಲ್ಲಿರುವ ಭಕ್ತನ ದೇವರ ಸಹಾಯದ ಬೇಡಿಕೆ. ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ; ಮನನೊಂದು ನನ್ನನ್ನು ಶಿಕ್ಷಿಸಬೇಡಿರಿ.
כי-חציך נחתו בי ותנחת עלי ידך 2
ಏಕೆಂದರೆ, ನಿಮ್ಮ ಬಾಣಗಳು ನನ್ನಲ್ಲಿ ನಾಟಿವೆ. ನಿಮ್ಮ ಶಿಕ್ಷಾ ಹಸ್ತವು ನನ್ನ ಮೇಲೆ ಭಾರವಾಗಿದೆ.
אין-מתם בבשרי מפני זעמך אין-שלום בעצמי מפני חטאתי 3
ನಿಮ್ಮ ಬೇಸರದ ನಿಮಿತ್ತ ನನ್ನ ಶರೀರದಲ್ಲಿ ಸ್ವಸ್ಥತೆ ಏನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ಕ್ಷೇಮವೇ ಇಲ್ಲ.
כי עונתי עברו ראשי כמשא כבד יכבדו ממני 4
ಏಕೆಂದರೆ, ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿ ಹೋಗಿವೆ; ದೋಷ ಭಾವನೆಯ ಹೊರೆಯು ನನಗೆ ಬಹುಭಾರವಾಗಿವೆ.
הבאישו נמקו חבורתי מפני אולתי 5
ನನ್ನ ಮೂರ್ಖತನದ ನಿಮಿತ್ತ ನನಗಾದ ಗಾಯಗಳು ದುರ್ವಾಸನೆಯಿಂದ ಕೀವು ತುಂಬಿವೆ.
נעויתי שחתי עד-מאד כל-היום קדר הלכתי 6
ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ. ದಿನವೆಲ್ಲಾ ದುಃಖದಿಂದ ನಾನು ಅಲೆಯುತ್ತಿದ್ದೇನೆ.
כי-כסלי מלאו נקלה ואין מתם בבשרי 7
ನನ್ನ ಸೊಂಟ ಬಹು ಬೇನೆಯಿಂದ ತುಂಬಿದೆ. ನನ್ನ ದೇಹದಲ್ಲಿ ಕ್ಷೇಮವೇ ಇಲ್ಲ.
נפוגותי ונדכיתי עד-מאד שאגתי מנהמת לבי 8
ಬಲಹೀನನಾಗಿದ್ದೇನೆ, ಬಹಳ ಜಜ್ಜಿ ಹೋಗಿದ್ದೇನೆ; ನನ್ನ ಹೃದಯದ ವೇದನೆಯಿಂದ ನರಳುತ್ತಾ ಇದ್ದೇನೆ.
אדני נגדך כל-תאותי ואנחתי ממך לא-נסתרה 9
ಯೆಹೋವ ದೇವರೇ, ನಿಮಗೆ ನನ್ನ ಅಪೇಕ್ಷೆಗಳೆಲ್ಲಾ ಗೊತ್ತೇ ಇದೆ; ನನ್ನ ನಿಟ್ಟುಸಿರು ನಿಮಗೆ ಮರೆಯಾದದ್ದಲ್ಲ.
לבי סחרחר עזבני כחי ואור-עיני גם-הם אין אתי 10
ನನ್ನ ಹೃದಯ ಬಡಿದುಕೊಳ್ಳುತ್ತದೆ. ನನ್ನ ಶಕ್ತಿಯು ನನ್ನನ್ನು ಬಿಟ್ಟುಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ಹೋಗಿಬಿಟ್ಟಿದೆ.
אהבי ורעי--מנגד נגעי יעמדו וקרובי מרחק עמדו 11
ನನ್ನ ಪ್ರಿಯರೂ, ನನ್ನ ಸ್ನೇಹಿತರೂ ನನ್ನ ಬಾಧೆಗೆ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
וינקשו מבקשי נפשי ודרשי רעתי דברו הוות ומרמות כל-היום יהגו 12
ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಆಲೋಚಿಸುತ್ತಾರೆ.
ואני כחרש לא אשמע וכאלם לא יפתח-פיו 13
ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳುವುದಿಲ್ಲ; ತನ್ನ ಬಾಯಿ ತೆರೆಯದ ಮೂಕನ ಹಾಗಿದ್ದೇನೆ.
ואהי--כאיש אשר לא-שמע ואין בפיו תוכחות 14
ನಾನು ಕಿವಿ ಕೇಳಿಸದವನಂತೆ ಇದ್ದೇನೆ. ನಾನು ಪ್ರತ್ಯುತ್ತರ ಕೊಡಲಾರದಂತೆಯೂ ಇದ್ದೇನೆ.
כי-לך יהוה הוחלתי אתה תענה אדני אלהי 15
ಯೆಹೋವ ದೇವರೇ, ನಿಮ್ಮನ್ನೇ ಎದುರು ನೋಡುತ್ತೇನೆ; ನನ್ನ ದೇವರಾದ ಯೆಹೋವ ದೇವರೇ, ನೀವು ಉತ್ತರ ಕೊಡುವಿರಿ.
כי-אמרתי פן-ישמחו-לי במוט רגלי עלי הגדילו 16
ಏಕೆಂದರೆ ನಾನು, “ಅವರು ನನಗೋಸ್ಕರ ಸಂತೋಷಪಡದೆ ಇರಲಿ ನನ್ನ ಪಾದ ಜಾರುವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳದಿರಲಿ,” ಎಂದುಕೊಂಡೆನು.
כי-אני לצלע נכון ומכאובי נגדי תמיד 17
ನಾನು ಎಡವಿ ಬೀಳಲಿದ್ದೇನೆ; ನನ್ನ ನೋವು ಯಾವಾಗಲೂ ನನ್ನ ಮುಂದೆ ಇದೆ.
כי-עוני אגיד אדאג מחטאתי 18
ನನ್ನ ಅಕ್ರಮವನ್ನು ಅರಿಕೆ ಮಾಡುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
ואיבי חיים עצמו ורבו שנאי שקר 19
ನನ್ನ ಶತ್ರುಗಳು ಬಲಗೊಂಡಿದ್ದಾರೆ. ನನ್ನನ್ನು ವಿನಾಕಾರಣವಾಗಿ ದ್ವೇಷಿಸುವವರು ಹೆಚ್ಚಿದ್ದಾರೆ.
ומשלמי רעה תחת טובה-- ישטנוני תחת רדופי- (רדפי-) טוב 20
ನನ್ನ ಶತ್ರುಗಳು ಒಳ್ಳೆಯದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುತ್ತಿದ್ದಾರೆ. ನಾನು ಒಳ್ಳೆಯದನ್ನು ಹಿಂದಟ್ಟುವ ಕಾರಣ ನನ್ನನ್ನು ಎದುರಿಸುತ್ತಾರೆ.
אל-תעזבני יהוה אלהי אל-תרחק ממני 21
ಯೆಹೋವ ದೇವರೇ, ನನ್ನನ್ನು ಬಿಡಬೇಡಿರಿ; ನನ್ನ ದೇವರೇ, ನನಗೆ ದೂರವಾಗಿರಬೇಡಿರಿ.
חושה לעזרתי אדני תשועתי 22
ನನ್ನ ರಕ್ಷಕ ಆಗಿರುವ ಯೆಹೋವ ದೇವರೇ, ನನ್ನ ಸಹಾಯಕ್ಕೆ ಬೇಗ ಬನ್ನಿರಿ.

< תהילים 38 >