< תהילים 40 >
למנצח לדוד מזמור ב קוה קויתי יהוה ויט אלי וישמע שועתי | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.
ויעלני מבור שאון-- מטיט היון ויקם על-סלע רגלי כונן אשרי | 2 |
೨ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
ויתן בפי שיר חדש-- תהלה לאלהינו יראו רבים וייראו ויבטחו ביהוה | 3 |
೩ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.
אשרי הגבר-- אשר-שם יהוה מבטחו ולא-פנה אל-רהבים ושטי כזב | 4 |
೪ಯಾರು ಅಹಂಕಾರಿಗಳ ಜೊತೆಯಲ್ಲಿಯೂ, ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.
רבות עשית אתה יהוה אלהי-- נפלאתיך ומחשבתיך אלינו אין ערך אליך--אגידה ואדברה עצמו מספר | 5 |
೫ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.
זבח ומנחה לא-חפצת-- אזנים כרית לי עולה וחטאה לא שאלת | 6 |
೬ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
אז אמרתי הנה-באתי במגלת-ספר כתוב עלי | 7 |
೭ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.
לעשות-רצונך אלהי חפצתי ותורתך בתוך מעי | 8 |
೮ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.
בשרתי צדק בקהל רב-- הנה שפתי לא אכלא יהוה אתה ידעת | 9 |
೯ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.
צדקתך לא-כסיתי בתוך לבי-- אמונתך ותשועתך אמרתי לא-כחדתי חסדך ואמתך לקהל רב | 10 |
೧೦ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
אתה יהוה-- לא-תכלא רחמיך ממני חסדך ואמתך תמיד יצרוני | 11 |
೧೧ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
כי אפפו-עלי רעות עד-אין מספר-- השיגוני עונתי ולא-יכלתי לראות עצמו משערות ראשי ולבי עזבני | 12 |
೧೨ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.
רצה יהוה להצילני יהוה לעזרתי חושה | 13 |
೧೩ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; ಯೆಹೋವನೇ, ಬೇಗನೆ ಬಂದು ಸಹಾಯಮಾಡು.
יבשו ויחפרו יחד-- מבקשי נפשי לספותה יסגו אחור ויכלמו-- חפצי רעתי | 14 |
೧೪ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.
ישמו על-עקב בשתם-- האמרים לי האח האח | 15 |
೧೫ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ.
ישישו וישמחו בך-- כל-מבקשיך יאמרו תמיד יגדל יהוה-- אהבי תשועתך | 16 |
೧೬ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ.
ואני עני ואביון-- אדני יחשב-לי עזרתי ומפלטי אתה אלהי אל-תאחר | 17 |
೧೭ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.