< תהילים 44 >

למנצח לבני-קרח משכיל ב אלהים באזנינו שמענו-- אבותינו ספרו-לנו פעל פעלת בימיהם בימי קדם 1
ಪ್ರಧಾನಗಾಯಕನ ಕೀರ್ತನಸಂಹಗ್ರದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.
אתה ידך גוים הורשת-- ותטעם תרע לאמים ותשלחם 2
ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
כי לא בחרבם ירשו ארץ וזרועם לא-הושיעה-למו כי-ימינך וזרועך ואור פניך-- כי רציתם 3
ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
אתה-הוא מלכי אלהים צוה ישועות יעקב 4
ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.
בך צרינו ננגח בשמך נבוס קמינו 5
ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.
כי לא בקשתי אבטח וחרבי לא תושיעני 6
ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ; ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು.
כי הושעתנו מצרינו ומשנאינו הבישות 7
ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.
באלהים הללנו כל-היום ושמך לעולם נודה סלה 8
ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.
אף-זנחת ותכלימנו ולא-תצא בצבאותינו 9
ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.
תשיבנו אחור מני-צר ומשנאינו שסו למו 10
೧೦ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ.
תתננו כצאן מאכל ובגוים זריתנו 11
೧೧ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.
תמכר-עמך בלא-הון ולא-רבית במחיריהם 12
೧೨ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.
תשימנו חרפה לשכנינו לעג וקלס לסביבותינו 13
೧೩ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.
תשימנו משל בגוים מנוד-ראש בלאמים 14
೧೪ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.
כל-היום כלמתי נגדי ובשת פני כסתני 15
೧೫ದೂಷಕರ ನಿಂದಾವಚನಗಳಿಂದಲೂ, ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ,
מקול מחרף ומגדף מפני אויב ומתנקם 16
೧೬ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.
כל-זאת באתנו ולא שכחנוך ולא-שקרנו בבריתך 17
೧೭ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!
לא-נסוג אחור לבנו ותט אשרינו מני ארחך 18
೧೮ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.
כי דכיתנו במקום תנים ותכס עלינו בצלמות 19
೧೯ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?
אם-שכחנו שם אלהינו ונפרש כפינו לאל זר 20
೨೦ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,
הלא אלהים יחקר-זאת כי-הוא ידע תעלמות לב 21
೨೧ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?
כי-עליך הרגנו כל-היום נחשבנו כצאן טבחה 22
೨೨ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.
עורה למה תישן אדני הקיצה אל-תזנח לנצח 23
೨೩ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.
למה-פניך תסתיר תשכח ענינו ולחצנו 24
೨೪ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?
כי שחה לעפר נפשנו דבקה לארץ בטננו 25
೨೫ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.
קומה עזרתה לנו ופדנו למען חסדך 26
೨೬ಎದ್ದು ಬಂದು ಸಹಾಯಮಾಡು; ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು.

< תהילים 44 >