< תהילים 45 >
למנצח על-ששנים לבני-קרח משכיל שיר ידידת ב רחש לבי דבר טוב-- אמר אני מעשי למלך לשוני עט סופר מהיר | 1 |
೧ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ. ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.
יפיפית מבני אדם-- הוצק חן בשפתותיך על-כן ברכך אלהים לעולם | 2 |
೨ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.
חגור-חרבך על-ירך גבור-- הודך והדרך | 3 |
೩ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.
והדרך צלח רכב-- על-דבר-אמת וענוה-צדק ותורך נוראות ימינך | 4 |
೪ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.
חציך שנונים עמים תחתיך יפלו בלב אויבי המלך | 5 |
೫ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.
כסאך אלהים עולם ועד שבט מישר שבט מלכותך | 6 |
೬ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.
אהבת צדק ותשנא-רשע על-כן משחך אלהים אלהיך שמן ששון-- מחברך | 7 |
೭ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.
מר-ואהלות קציעות כל-בגדתיך מן-היכלי שן מני שמחוך | 8 |
೮ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.
בנות מלכים ביקרותיך נצבה שגל לימינך בכתם אופיר | 9 |
೯ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು.
שמעי-בת וראי והטי אזנך ושכחי עמך ובית אביך | 10 |
೧೦ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.
ויתאו המלך יפיך כי-הוא אדניך והשתחוי-לו | 11 |
೧೧ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು.
ובת-צר במנחה פניך יחלו--עשירי עם | 12 |
೧೨ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.
כל-כבודה בת-מלך פנימה ממשבצות זהב לבושה | 13 |
೧೩ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.
לרקמות תובל למלך בתולות אחריה רעותיה--מובאות לך | 14 |
೧೪ಆಕೆಯು ಬೂಟೇದಾರಿ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು.
תובלנה בשמחת וגיל תבאינה בהיכל מלך | 15 |
೧೫ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, ಅರಮನೆಯೊಳಗೆ ಪ್ರವೇಶಿಸುವರು.
תחת אבתיך יהיו בניך תשיתמו לשרים בכל-הארץ | 16 |
೧೬ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ.
אזכירה שמך בכל-דר ודר על-כן עמים יהודוך לעלם ועד | 17 |
೧೭ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.