< תהילים 49 >

למנצח לבני-קרח מזמור ב שמעו-זאת כל-העמים האזינו כל-ישבי חלד 1
ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.
גם-בני אדם גם-בני-איש-- יחד עשיר ואביון 2
ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.
פי ידבר חכמות והגות לבי תבונות 3
ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.
אטה למשל אזני אפתח בכנור חידתי 4
ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.
למה אירא בימי רע-- עון עקבי יסובני 5
ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?
הבטחים על-חילם וברב עשרם יתהללו 6
ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.
אח--לא פדה יפדה איש לא-יתן לאלהים כפרו 7
ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.
ויקר פדיון נפשם וחדל לעולם 8
ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.
ויחי-עוד לנצח לא יראה השחת 9
ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.
כי יראה חכמים ימותו-- יחד כסיל ובער יאבדו ועזבו לאחרים חילם 10
೧೦ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
קרבם בתימו לעולם-- משכנתם לדור ודר קראו בשמותם עלי אדמות 11
೧೧ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.
ואדם ביקר בל-ילין נמשל כבהמות נדמו 12
೧೨ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.
זה דרכם כסל למו ואחריהם בפיהם ירצו סלה 13
೧೩ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. (ಸೆಲಾ)
כצאן לשאול שתו-- מות ירעם וירדו בם ישרים לבקר--וצירם (וצורם) לבלות שאול מזבל לו (Sheol h7585) 14
೧೪ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು. (Sheol h7585)
אך-אלהים--יפדה נפשי מיד-שאול כי יקחני סלה (Sheol h7585) 15
೧೫ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. (ಸೆಲಾ) (Sheol h7585)
אל-תירא כי-יעשר איש כי-ירבה כבוד ביתו 16
೧೬ಒಬ್ಬನ ಐಶ್ವರ್ಯವೂ, ಗೃಹವೈಭವವೂ ವೃದ್ಧಿಯಾದಾಗ ಕಳವಳಪಡಬೇಡ.
כי לא במותו יקח הכל לא-ירד אחריו כבודו 17
೧೭ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.
כי-נפשו בחייו יברך ויודך כי-תיטיב לך 18
೧೮ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ,
תבוא עד-דור אבותיו עד-נצח לא יראו-אור 19
೧೯ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.
אדם ביקר ולא יבין נמשל כבהמות נדמו 20
೨೦ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.

< תהילים 49 >