< תהילים 5 >
למנצח אל-הנחילות מזמור לדוד ב אמרי האזינה יהוה בינה הגיגי | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ. ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ.
הקשיבה לקול שועי--מלכי ואלהי כי-אליך אתפלל | 2 |
೨ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು.
יהוה--בקר תשמע קולי בקר אערך-לך ואצפה | 3 |
೩ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
כי לא אל חפץ רשע אתה לא יגרך רע | 4 |
೪ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.
לא-יתיצבו הוללים לנגד עיניך שנאת כל-פעלי און | 5 |
೫ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.
תאבד דברי כזב איש-דמים ומרמה יתעב יהוה | 6 |
೬ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.
ואני--ברב חסדך אבוא ביתך אשתחוה אל-היכל-קדשך ביראתך | 7 |
೭ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
יהוה נחני בצדקתך--למען שוררי הושר (הישר) לפני דרכך | 8 |
೮ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
כי אין בפיהו נכונה--קרבם הוות קבר-פתוח גרנם לשונם יחליקון | 9 |
೯ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.
האשימם אלהים-- יפלו ממעצותיהם ברב פשעיהם הדיחמו-- כי-מרו בך | 10 |
೧೦ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.
וישמחו כל-חוסי בך לעולם ירננו-- ותסך עלימו ויעלצו בך אהבי שמך | 11 |
೧೧ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.
כי-אתה תברך צדיק יהוה--כצנה רצון תעטרנו | 12 |
೧೨ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.