< תהילים 50 >

מזמור לאסף אל אלהים יהוה-- דבר ויקרא-ארץ ממזרח-שמש עד-מבאו 1
ಆಸಾಫನ ಕೀರ್ತನೆ. ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.
מציון מכלל-יפי-- אלהים הופיע 2
ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.
יבא אלהינו ואל-יחרש אש-לפניו תאכל וסביביו נשערה מאד 3
ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
יקרא אל-השמים מעל ואל-הארץ לדין עמו 4
ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.
אספו-לי חסידי-- כרתי בריתי עלי-זבח 5
“ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.
ויגידו שמים צדקו כי-אלהים שפט הוא סלה 6
ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. (ಸೆಲಾ)
שמעה עמי ואדברה-- ישראל ואעידה בך אלהים אלהיך אנכי 7
ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.
לא על-זבחיך אוכיחך ועולתיך לנגדי תמיד 8
ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
לא-אקח מביתך פר ממכלאתיך עתודים 9
ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
כי-לי כל-חיתו-יער בהמות בהררי-אלף 10
೧೦ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.
ידעתי כל-עוף הרים וזיז שדי עמדי 11
೧೧ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
אם-ארעב לא-אמר לך כי-לי תבל ומלאה 12
೧೨ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.
האוכל בשר אבירים ודם עתודים אשתה 13
೧೩ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?
זבח לאלהים תודה ושלם לעליון נדריך 14
೧೪ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
וקראני ביום צרה אחלצך ותכבדני 15
೧೫ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
ולרשע אמר אלהים מה-לך לספר חקי ותשא בריתי עלי-פיך 16
೧೬ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
ואתה שנאת מוסר ותשלך דברי אחריך 17
೧೭ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
אם-ראית גנב ותרץ עמו ועם מנאפים חלקך 18
೧೮ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
פיך שלחת ברעה ולשונך תצמיד מרמה 19
೧೯ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ.
תשב באחיך תדבר בבן-אמך תתן-דפי 20
೨೦ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.
אלה עשית והחרשתי-- דמית היות-אהיה כמוך אוכיחך ואערכה לעיניך 21
೨೧ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.
בינו-נא זאת שכחי אלוה פן-אטרף ואין מציל 22
೨೨ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
זבח תודה יכבדנני ושם דרך--אראנו בישע אלהים 23
೨೩ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”

< תהילים 50 >