< תהילים 52 >

למנצח משכיל לדוד ב בבוא דואג האדמי-- ויגד לשאול ויאמר לו-- בא דוד אל-בית אחימלך ג מה-תתהלל ברעה הגבור חסד אל כל-היום 1
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.
הוות תחשב לשונך כתער מלטש עשה רמיה 2
ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.
אהבת רע מטוב שקר מדבר צדק סלה 3
ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. (ಸೆಲಾ)
אהבת כל-דברי-בלע לשון מרמה 4
ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
גם-אל יתצך לנצח יחתך ויסחך מאהל ושרשך מארץ חיים סלה 5
ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
ויראו צדיקים וייראו ועליו ישחקו 6
ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ,
הנה הגבר-- לא ישים אלהים מעוזו ויבטח ברב עשרו יעז בהותו 7
“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
ואני כזית רענן-- בבית אלהים בטחתי בחסד-אלהים עולם ועד 8
ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
אודך לעולם כי עשית ואקוה שמך כי-טוב נגד חסידיך 9
ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.

< תהילים 52 >