< תהילים 55 >
למנצח בנגינת משכיל לדוד ב האזינה אלהים תפלתי ואל-תתעלם מתחנתי | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಪದ್ಯ. ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.
הקשיבה לי וענני אריד בשיחי ואהימה | 2 |
೨ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.
מקול אויב--מפני עקת רשע כי-ימיטו עלי און ובאף ישטמוני | 3 |
೩ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.
לבי יחיל בקרבי ואימות מות נפלו עלי | 4 |
೪ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.
יראה ורעד יבא בי ותכסני פלצות | 5 |
೫ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.
ואמר--מי-יתן-לי אבר כיונה אעופה ואשכנה | 6 |
೬ನಾನು, “ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.
הנה ארחיק נדד אלין במדבר סלה | 7 |
೭ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,
אחישה מפלט לי-- מרוח סעה מסער | 8 |
೮ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. (ಸೆಲಾ)
בלע אדני פלג לשונם כי-ראיתי חמס וריב בעיר | 9 |
೯ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.
יומם ולילה--יסובבה על-חומתיה ואון ועמל בקרבה | 10 |
೧೦ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.
הוות בקרבה ולא-ימיש מרחבה תך ומרמה | 11 |
೧೧ಅದರೊಳಗೆಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು.
כי לא-אויב יחרפני ואשא לא-משנאי עלי הגדיל ואסתר ממנו | 12 |
೧೨ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
ואתה אנוש כערכי אלופי ומידעי | 13 |
೧೩ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.
אשר יחדו נמתיק סוד בבית אלהים נהלך ברגש | 14 |
೧೪ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ.
ישימות (ישי מות) עלימו--ירדו שאול חיים כי-רעות במגורם בקרבם (Sheol ) | 15 |
೧೫ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ. (Sheol )
אני אל-אלהים אקרא ויהוה יושיעני | 16 |
೧೬ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು.
ערב ובקר וצהרים אשיחה ואהמה וישמע קולי | 17 |
೧೭ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ
פדה בשלום נפשי מקרב-לי כי-ברבים היו עמדי | 18 |
೧೮ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.
ישמע אל ויענם-- וישב קדם סלה אשר אין חליפות למו ולא יראו אלהים | 19 |
೧೯ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. (ಸೆಲಾ) ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ.
שלח ידיו בשלמיו חלל בריתו | 20 |
೨೦ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
חלקו מחמאת פיו-- וקרב-לבו רכו דבריו משמן והמה פתחות | 21 |
೨೧ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
השלך על-יהוה יהבך-- והוא יכלכלך לא-יתן לעולם מוט-- לצדיק | 22 |
೨೨ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.
ואתה אלהים תורדם לבאר שחת-- אנשי דמים ומרמה לא-יחצו ימיהם ואני אבטח-בך | 23 |
೨೩ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.